ನೋಂದಣಿಗಾಗಿ ಅರ್ಜಿ ಆಹ್ವಾನ

TUMKUR-PALIKE
Published on

ತುಮಕೂರು: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮ್ಯಾನ್ಯುಯಲ್​ ಸ್ಕ್ಯಾವೆಂಜರ್​ಗಳ ಸಮೀಕ್ಷೆ ನಡೆಸಲು ಉದ್ದೇಶಿಸಲಾಗಿದ್ದು, ಒಣ ಶೌಚಾಲಯಗಳನ್ನು ಸ್ವಚ್ಛಗೊಳಿಸುವ, ಅನೈರ್ಮಲ್ಯ ಶೌಚಾಲಯಗಳಿಂದ ಹೊರಹೋಗಿ ತೆರೆದ ಚರಂಡಿಯಲ್ಲಿ ಸಂಗ್ರಹವಾಗುವ ಮಾನವ ಮಲವನ್ನು ಸ್ವಚ್ಛಗೊಳಿಸುವ, ಶೌಚಾಲಯದ ಮಲಗುಂಡಿಗಳನ್ನು ದೈಹಿಕವಾಗಿ ಸ್ವಚ್ಛಗೊಳಿಸುವ ಕಾರ್ಯದಲ್ಲಿ ತೊಡಗಿಕೊಂಡಿರುವ ಯಾವುದೇ ವ್ಯಕ್ತಿಗಳು ನ.15ರೊಳಗಾಗಿ ಹೆಸರು

ನೋಂದಾಯಿಸಿಕೊಳ್ಳಬೇಕು.

ಅರ್ಹ ಮ್ಯಾನ್ಯುಯಲ್​ ಸ್ಕ್ಯಾವೆಂಜರ್​ಗಳು ನೋಂದಣಿಗಾಗಿ ತಮ್ಮ ಪಾಸ್​ ಪೋರ್ಟ್​ ಅಳತೆಯ ಭಾವಚಿತ್ರ, ಕುಟುಂಬದ ಸದಸ್ಯರನ್ನೊಳಗೊಂಡ ಭಾವಚಿತ್ರ, ಬ್ಯಾಂಕ್​ ಖಾತೆಯ ಪಾಸ್​ಬುಕ್​, ಆಧಾರ್​ ಪ್ರತಿ, ಮ್ಯಾನ್ಯುಯಲ್​ ಸ್ಕ್ಯಾವೆಂಜಿಂಗ್​ ಕಾರ್ಯನಿರ್ವಹಿಸುತ್ತಿರುವ ಅನೈರ್ಮಲ್ಯ ಶೌಚಾಲಯ ಸ್ಥಳದ ವಿವರ, ಮತ್ತಿತರ ಅಗತ್ಯ ದಾಖಲೆಗಳನ್ನು ಮಹಾನಗರಪಾಲಿಕೆಯ ಒಳಚರಂಡಿ ಶಾಖೆ ಸಂಪರ್ಕಿಸಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net