

ತುಮಕೂರು: ಸೇವೆ ಖಾಯಮಾತಿ ಮತ್ತು ಸೇವಾ ಭದ್ರತೆಗೆ ಸರ್ಕಾರಿ ಪದವಿ ಕಾಲೇಜು ಅತಿಥಿ ಉಪನ್ಯಾಸಕರು ಬುಧವಾರ ಪಂಜಿನ ಮೆರವಣಿಗೆ ಮೂಲಕ ಪ್ರತಿಭಟನೆ ಮುಂದುವರಿಸಿದರು.
ನಗರದ ಸ್ವತಂತ್ರÈ ಚೌಕದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೂ ಆಯೋಜಿಸಿದ್ದ ಪಂಜಿನ ಮೆರವಣಿಗೆಯಲ್ಲಿ ನೂರಾರು ಅತಿಥಿ ಉಪನ್ಯಾಸಕರು ಭಾಗವಹಿಸಿ ಬಹುದಿನಗಳ ಬೇಡಿಕೆ ಈಡೇರಿಕೆಗೆ ಆಗ್ರಹಿಸಿದರು.
ಅತಿಥಿ ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ಡಾ.ಕೆ.ಎಚ್.ಧರ್ಮವೀರ, ಡಾ.ಶಿವಣ್ಣ ತಿಮ್ಮಲಾಪುರ, ಡಾ.ಎಂ.ಟಿ.ಮಲ್ಲಿಕಾರ್ಜನಯ್ಯ, ಕೆ.ಆರ್.ಅಂಭಿಕಾ, ಸವಿತ, ವಿನುತಾ, ಶಂಕರ್, ಗಿರೀಶ್ ಮತ್ತಿತರರು ಇದ್ದರು.