

ತುಮಕೂರು: ಕುಣಿಗಲ್ ತಾಲೂಕು ಹುಲಿಯೂರುದುರ್ಗದಲ್ಲಿ ಡಾ.ಜಿ.ಪರಮೇಶ್ವರ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಜನತಾದರ್ಶನದಲ್ಲಿ ಸಮಸ್ಯೆಗಳ ಮಹಾಪೂರವೇ ಹರಿದುಬಂದಿದೆ.
ಕೃಷಿ, ಕಂದಾಯ ಇಲಾಖೆ ಅಧಿಕಾರಿಗಳ ಮೇಲೆ ರೈತರು ದೂರುಗಳ ಸುರಿಮಳೆಗೈದ ಹಿನ್ನೆಲೆಯಲ್ಲಿ ಮುಜುಗರಕ್ಕೀಡಾದ ಡಾ.ಜಿ.ಪರಮೇಶ್ವರ, ಸಭೆಯಲ್ಲಿಯೇ ಅಧಿಕಾರಿಗಳ ವಿರುದ್ಧ ಹರಿಹಾಯ್ದರು.
ಕೃಷಿ ಇಲಾಖೆ ಅಧಿಕಾರಿಗಳು ವಿಮೆ ಬಗ್ಗೆಯೂ ಸರಿಯಾದ ಮಹಿತಿ ನೀಡಿಲ್ಲ ಎಂದು ದೂರಿನ ಹಿನ್ನೆಲೆಯಲ್ಲಿ ಜೆಡಿಎ ಡಾ.ರಮೇಶ್‌ಗೆ ಬೆವರಿಳಿಸಿದರು. ಎಡಿಎ ರಂಗನಾಥ್ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿಗೆ ಸೂಚಿಸಿದರು.