ಜಿಲ್ಲೆಯಲ್ಲಿ 12 ಸಾವಿರ ನಿರುದ್ಯೋಗಿಗಳಿಗೆ ಯುವನಿಧಿ ಗ್ಯಾರಂಟಿ

PAR
Published on

ತುಮಕೂರು: ರಾಜ್ಯ ಸರ್ಕಾರ ಮಹತ್ವಾಕಾಂಕ್ಷಿ ಯುವನಿಧಿ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ 12 ಸಾವಿರ ನಿರುದ್ಯೋಗಿಗಳು ಸಹಾಯ ಪಡೆಯಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2022-23ನೇ ಸಾಲಿನಲ್ಲಿ ಪದವಿ ಪೂರ್ಣಗೊಳಿಸಿರುವ 10 ಸಾವಿರ ಹಾಗೂ ಡಿಪ್ಲೊಮಾ ಮುಗಿಸಿರುವ 2 ಸಾವಿರ ನಿರುದ್ಯೋಗಿಗಳಿಗೆ ಮುಂದಿನ ಆರು ತಿಂಗಳು ಸರ್ಕಾರ ನೆರವು ನೀಡಲಿದೆ ಎಂದರು.

ಯುವನಿಧಿ ಯೋಜನೆಯಡಿ ಪದವಿ ಮುಗಿಸಿದ ಅರ್ಹ ಫಲಾನುಭವಿಗಳಿಗೆ ಮಾಸಿಕ 3 ಸಾವಿರ ರೂ. ಹಾಗೂ ಡಿಪ್ಲೊಮಾ ತೇರ್ಗಡೆಯಾದವರಿಗೆ 1500ರೂ. ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ಜಮೆ ಮಾಡಲಾಗುವುದು ಎಂದರು.

https://sevasindhugs.karnataka.gov.in ಮೂಲಕ ಅರ್ಹರು ಹೆಸರು ನೋಂದಾಯಿಸಿಕೊಳ್ಳಬೇಕು. ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿದವರಿಗೆ ಮಾತ್ರ ಈ ಸೌಲಭ್ಯ ನೀಡಲಾಗುವುದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net