

ತುಮಕೂರು: ಪೊಲೀಸ್ ಅಧಿಕಾರಿಗಳ ವರ್ಗಾವಣೆಗೆ ಪ್ರಸ್ತುತ ಇರುವ ಒಂದು ವರ್ಷದ ಸೇವಾವದಿಯನ್ನು ಎರಡು ವರ್ಷಕ್ಕೆ ಹೆಚ್ಚಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಭರವಸೆ ನೀಡಿದರು.
ನಗರದಲ್ಲಿ ಇಂದು ಸರ್ಕಾರಿ ನೌಕರರ ಆರೋಗ್ಯ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ವರ್ಗಾವಣೆ ಮೂಲಕ ಅಧಿಕಾರಿಗಳಿಗೆ ತೊಂದರೆ ನೀಡಲು ನಮ್ಮ ಸರ್ಕಾರ ಬಯಸುವುದಿಲ್ಲ ಎಂದರು.
ಪೊಲೀಸ್ ಇಲಾಖೆಯಲ್ಲಿ ಕನಿಷ್ಠ 1 ವರ್ಷ ಪೂರೈಸಿದವರಿಗೆ ವರ್ಗಾವಣೆ ಮಾಡಲು ಅವಕಾಶವಿದೆ. ಈ ನಿಯಮ ಬದಲಿಸಿ ಕನಿಷ್ಠ 2 ವರ್ಷ ಒಂದೇ ಕಡೆ ಸೇವೆ ಸಲ್ಲಿಸಲು ಅವಕಾಶ ನೀಡಲು ಶೀಘ್ರದಲ್ಲಿಯೇ ತೀರ್ಮಾನಿಸಲಾಗುವುದು ಎಂದರು.