ಎಚ್ಚರಿಕೆ !! ಸುಳ್ಳು ಸುದ್ದಿ ಹರಡಬೇಡಿ

Social_Media_Fake_01
Published on

ತುಮಕೂರು: ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಿಬಿಡುವವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಜಿಲ್ಲಾ ಪೊಲೀಸ್ ಇಲಾಖೆ ಮುಂದಾಗಿದೆ ! ಪ್ರಚೋದನಕಾರಿ ಪೋಸ್ಟ್ ಹಾಕಿದರೆ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವುದಾಗಿ ಸಾರ್ವಜನಿಕರಿಗೆ ಎಚ್ಚರಿಸಿದ್ದು ತುಮಕೂರು ಪೊಲೀಸ್ ಫೇಸ್‌ಬುಕ್ ಪೇಜ್‌ನಲ್ಲಿ ಪ್ರಕಟಣೆ ಹೊರಡಿಸಲಾಗಿದೆ.

ಸಾಮಾಜಿಕ ಜಾಲತಾಣಗಳನ್ನು ಜನ ಸ್ನೇಹಿಯಾಗಿ ಬಳಕೆ ಮಾಡಿಕೊಳ್ಳಲು ಮನವಿ ಮಾಡಿರುವ ಪೊಲೀಸರು, ಪ್ರಚೋದನಾಕಾರಿ ವಿಷಯಗಳನ್ನು ಹರಡಿಸಿ ಸಾಮಾಜಿಕ ಸಾಮರಸ್ಯ ಕದುಡುವರ ಮೇಲೆ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದೆ. ನೈಜ ಸುದ್ದಿಗಳನ್ನು ತಿರುಚಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟರೆ ಪ್ರಕರಣ ದಾಖಲಿಸುವುದಾಗಿ ಪ್ರಕಟಣೆಯಲ್ಲಿ ತಿಳಿಸಿದೆ.

ಎಸ್‌ಪಿ ತುಮಕೂರು ಫೇಸ್‌ಬುಕ್ ಪೇಜ್‌ನಿಂದ ಎಚ್ಚರಿಕೆ!! ಸುಳ್ಳು ಸುದ್ದಿ ಹಬ್ಬಿಸಬೇಡಿ. ಸುಳ್ಳು ಸುದ್ದಿ ಹರಡದಂತೆ ಎಚ್ಚರ ವಹಿಸಿ ಎಂದು ಪೋಸ್ಟ್ ಹಾಕಿರುವುದು ಸೋಷಿಯಲ್ ಮೀಡಿಯಾದಲ್ಲಿ ಪ್ರಚೋದನಾಕಾರಿ ವಿಷಯಗಳನ್ನು ಪೋಸ್ಟ್ ಮಾಡುವರಿಗೆ ಎಚ್ಚರಿಕೆ ಗಂಟೆ ಎನಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net