

ತುಮಕೂರು: ಸೌಜನ್ಯ ಪ್ರಕರಣದಲ್ಲಿ ಧರ್ಮಸ್ಥಳದ ಭಕ್ತರ ಮನಸ್ಸಿಗೆ ನೋವಾಗುವಂತೆ ಕೆಲವರು ಅಪಪ್ರಚಾರ ನಡೆಸುತ್ತಿದ್ದು ಅಂತಹವರಿಗೆ ಒಳ್ಳೆಯ ಬುದ್ಧಿ ಬರಲೆಂದು ಪ್ರಾರ್ಥಿಸಿ ಚಿಕ್ಕನಾಯಕನಹಳ್ಳಿ ತಾಲೂಕು ಹುಳಿಯಾರು ಅಂಜನೇಯಸ್ವಾಮಿ ದೇವಾಲಯದಲ್ಲಿ ಭಕ್ತರು ವಿಶೇಷ ಪೂಜೆ ಸಲ್ಲಿಸಿದರು.
ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಯೋಜನಾಧಿಕಾರಿ ರಾಮಚಂದ್ರ, ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆಂಕೆರೆ ಸತೀಶ್,ಧರ್ಮಸ್ಥಳ ಸಂಘದ ಜಿಲ್ಲಾ ನಿರ್ದೇಶಕ ದಿನೇಶ್, ಹುಳಿಯಾರು ಆಂಜನೇಯ ಸ್ವಾಮಿ ದೇವಸ್ಥಾನದ ಅಧ್ಯಕ್ಷ ಬಡಗಿ ರಾಮಣ್ಣ, ಕಾರ್ಯದರ್ಶಿ ಧನಂಜಯ, ಪಟ್ಟಣ ಪಂಚಾಯಿತಿ ಸದಸ್ಯ ದಯಾನಂದ್, ಗೀತಾ ಅಶೋಕ್, ಸ್ಟುಡಿಯೋ ದುರ್ಗರಾಜು ಮತ್ತಿತರರು ಇದ್ದರು