ಅನುದಾನ ವಾಪಸ್ ಖಂಡಿಸಿ ಅಲೆಮಾರಿಗಳ ಪ್ರತಿಭಟನೆ; ಸರ್ಕಾರಕ್ಕೆ ಮನವಿ

Alemarriiiiiii
Published on

ತುಮಕೂರು: ಹಿಂದುಳಿದ ಅಲೆಮಾರಿ ಜನಾಂಗಗಳ ಅಭಿವೃದ್ಧಿಗೆ ಮೀಸಲಿದ್ದ ಅನುದಾನವನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿದೆ ಎಂದು ಆರೋಪಿಸಿ ಅಲೆಮಾರಿ ಸಂಘಟನೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬುಧವಾರ ಪ್ರತಿಭಟನೆ ನಡೆಸಲಾಯಿತು.

ಅಲೆಮಾರಿ ಜನಾಂಗಗಳ ಸಂಘಟನೆ, ದಲಿತ ಸಂಘರ್ಷ ಸಮಿತಿ, ದಕ್ಕಲಿಗರ ಸಂಘಗಳ ಸಹಯೋಗದಲ್ಲಿ ನಡೆದ ಪ್ರತಿಭಟನೆಯಲ್ಲಿ ದಲಿತ ಮುಖಂಡ ಕೊಟ್ಟಶಂಕರ್ ಮಾತನಾಡಿ, ರಾಜ್ಯ ಸರ್ಕಾರಕ್ಕೆ ಅಲೆಮಾರಿ ಜನಾಂಗ ಸೇರಿದಂತೆ ಹಿಂದುಳಿದ ತಳ ಸಮುದಾಯದ ಹಿತ ರಕ್ಷಣೆ ಮಾಡಲು ಆಸಕ್ತಿ ಇಲ್ಲ ಎಂದು ಆಕ್ರೋಶ ಹೊರಹಾಕಿದರು.

ಅಲೆಮಾರಿ ಸಮುದಾಯದ ಅಭಿವೃದ್ಧಿಗಾಗಿ ಮೀಸಲಿಟ್ಟಿದ್ದ 550 ಕೋಟಿ ರೂ. ಅನುದಾನವನ್ನು ಸರ್ಕಾರ ಯಾವುದೋ ಕಾರಣ ನೀಡಿ ವಾಪಸ್ ಪಡೆದಿರುವುದು ಖಂಡನೀಯ ಎಂದರು.

ಹುಳಿಯಾರು ರಾಜಪ್ಪ ನೇತೃತ್ವದಲ್ಲಿ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಸೋರಲಮಾವು ಶ್ರೀನಿವಾಸ್, ದೊಡ್ಡಗುಣಿ ಜಯಣ್ಣ, ಚಿಕ್ಕನಾಯಕನಹಳ್ಳಿ ಶಾಂತರಾಜು ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net