

ತುಮಕೂರು:ದಾವಣಗೆರೆ ಬಡಾವಣೆ ಪೊಲೀಸ್ ಠಾಣೆ ಪಿಎಸ್ಐ ನಾಗರಾಜಯ್ಯ(55) ತುಮಕೂರಿನ ದ್ವಾರಕಾ ಹೋಟೆಲ್ ಕೊಠಡಿಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಜು.1ರಂದು ತುಮಕೂರು ನಗರದದಲ್ಲಿರುವ ದ್ವಾರಕಾ ಹೋಟೆಲ್ ಲಾಡ್ಜ್ ನಲ್ಲಿ ರೂಂ ಬಾಡಿಗೆ ಪಡೆದಿದ್ದ ಸಬ್ಇನ್ಸ್ ಪೆಕ್ಟರ್ ನಾಗರಾಜು.
4ನೇ ಮಹಡಿಯಲ್ಲಿ ರೂಂ ಬಾಡಿಗೆ ಪಡೆದಿದ್ದರು. ಡೇತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು ಅವರಿಗೆ ಸಂಬಂಧಪಟ್ಟ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೌಟುಂಬಿಕ ಸಮಸ್ಯೆಗಳನ್ನ ಪತ್ರದಲ್ಲಿ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಲಾಡ್ಜ್ನಲ್ಲಿ ದುರ್ವಾಸನೆ ಬಂದಾಗ ಲಾಡ್ಜ್ ಸಿಬ್ಬಂದಿಗೆ ಆತ್ಮಹತ್ಯೆಗೆ ವಿಷಯ ತಿಳಿದುಬಂದಿದೆ. ತುಮಕೂರು ನಗರಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ, ಪರಿಶೀಲನೆ ನಡೆಸಿದ್ದಾರೆ.