

ತುಮಕೂರು: ಗೃಹ ಸಚಿವರ ತವರು ಜಿಲ್ಲೆಯಲ್ಲಿ ಪೊಲೀಸ್ ಅಧಿಕಾರಿಗಳ ಕಾರ್ಯವೈಖರಿ ಬೆಚ್ಚೀಬಿಳಿಸುವಂತಿದೆ. ತುರುವೇಕೆರೆ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ಸಂಗಪ್ಪ ಮೇಟಿ ಕರ್ತವ್ಯಲೋಪದ ಆರೋಪದ ಮೇಲೆ ಸೇವೆಯಿಂದ ಅಮಾನತಾಗಿದ್ದಾರೆ.
ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿಯ ವಿಚಾರಣೆ ಸಂದರ್ಭದಲ್ಲಿ ಆತನ ಮೊಬೈಲ್ ವಶಕ್ಕೆ ಪಡೆದುಕೊಂಡಿದ್ದ ಸಬ್ ಇನ್ಸ್ಪೆಕ್ಟರ್ ಸಂಗಪ್ಪ ಮೇಟಿ ಆರೋಪಿ ಪೋನ್ಪೇ ಪಾಸ್ವರ್ಡ್ ಪಡೆದು, ಅದರ ಮೂಲಕ ಆನ್ಲೈನ್ ಬೆಟ್ಟಿಂಗ್ ಆಡಿದ ಆರೋಪದ ಮೇಲೆ ಅಮಾನತುಗೊಂಡಿದ್ದಾರೆ.
ಕರ್ತವ್ಯ ಲೋಪದ ಆರೋಪದ ಮೇಲೆ ತುಮಕೂರು ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ವಿ.ಅಶೋಕ್ ಅಮಾನತುಗೊಳಿಸಿದ್ದು ಆರೋಪಿ ಪಿಎಸ್ಐ ಸಂಗಪ್ಪ ಮೇಟಿ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ ಬ್ಯಾಂಕ್ ಖಾತೆಯಲ್ಲಿದ್ದ ಸುಮಾರು 95000 ರೂ. ಹಣ ದುರುಪಯೋಗ ಪಡಿಸಿಕೊಂಡಿರುವುದು ತನಿಖೆಯಲ್ಲಿ ದೃಢಪಟ್ಟಿದೆ.