

ತುಮಕೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಖಾಲಿಯಿರುವ 13000 ಚಾಲಕ, ನಿರ್ವಾಹಕರ ಹುದ್ದೆಗೆ ನೇಮಕಾತಿಗೆ ಆರ್ಥಿಕ ಇಲಾಖೆ ಅನುಮತಿ ಕೋರಿ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಹೇಳೀದರು.
ನಗರದಲ್ಲಿ ಸ್ಮಾರ್ಟ್ಸಿಟಿ ಯೋಜನೆ ವತಿಯಿಂದ ನಿರ್ಮಿಸುತ್ತಿರುವ ಕೆಎಸ್‌ಆರ್‌ಟಿಸಿ ಬಸ್‌ನಿಲ್ದಾಣ ಕಾಮಗಾರಿಯನ್ನು ಬುಧವಾರ ವೀಕ್ಷಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.
2016ರಲ್ಲಿ ಚಾಲಕ, ನಿರ್ವಾಹಕರ ನೇಮಕಾತಿ ಮಾಡಲಾಗಿತ್ತು. ನಂತರ 7 ವರ್ಷಗಳಿಂದ ನೇಮಕಾತಿ ಪ್ರಕ್ರಿಯೆ ನಡೆದಿಲ್ಲ. ಹಾಗಾಗಿ, ಹೊಸ ನೇಮಕಾತಿಗೆ ಕ್ರಮಕೈಗೊಳ್ಳಲಾಗಿದೆ. ಜತೆಗೆ 5000 ಹೊಸ ಬಸ್ಸುಗಳ ಖರೀದಿಗೆ ಸಿಎಂ 500 ಕೋಟಿ ರೂ. ಅನುದಾನ ಒದಗಿಸಿದ್ದಾರೆ ಎಂದರು.