26ರಂದು ಗೌರವ ಸಮರ್ಪಣೆ ಕಾರ್ಯಕ್ರಮ

Sangolli Rayanna
Published on

ತುಮಕೂರು: ಜಿಲ್ಲಾಡಳಿತದ ವತಿಯಿಂದ ಜ.26ರಂದು ಬೆಳಗ್ಗೆ 7.30ಕ್ಕೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರು ಹುತಾತ್ಮರಾದ ಸ್ಮರಣಾರ್ಥವಾಗಿ ಗೌರವ ಸಮರ್ಪಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಭಾವಚಿತ್ರಕ್ಕೆ ಪುಫ್ಪಿ ನಮನ ಸಲ್ಲಿಸುವ ಮೂಲಕ ಕಾರ್ಯಕ್ರಮ ಆಚರಿಸಲಾಗುವುದು. ಇಲಾಖಾಧಿಕಾರಿ, ಸಿಬ್ಬಂದಿ ವರ್ಗ, ಸಮುದಾಯದ ಮುಖಂಡರು, ಗಣ್ಯರು, ಕಲಾವಿದರು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net