

ತುಮಕೂರು: ಕರ್ನಾಟಕದ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ.ಬಿ.ಆರ್.ಅಂಬೇಡ್ಕರ್, ಅಟಲ್ ಬಿಹಾರಿ ವಾಜಪೇಯಿ, ಇಂದಿರಾಗಾAಧಿ, ಏಕಲವ್ಯ ಮಾದರಿ ವಸತಿ ಶಾಲೆ ಹಾಗೂ ಕಾಲೇಜುಗಳ ಪೈಕಿ ವಸತಿ ಶಾಲೆಗಳಲ್ಲಿ ಶೇ.25ಕ್ಕಿಂತ ಹೆಚ್ಚಿನ ಅಂಗವಿಕಲತೆ ಪ್ರಮಾಣದ ವಿಕಲಚೇತನ ಮಕ್ಕಳು, ಎಚ್‌ಐವಿಗೆ ತುತ್ತಾದ ಪೋಷಕರ ಮಕ್ಕಳು, ಏಕ ಪೋಷಕ ಅಥವಾ ಅನಾಥ ಮಕ್ಕಳಿಗೆ ಶೇ.10ರಷ್ಟು ಮೀಸಲಾತಿ ನಿಗಧಿಪಡಿಸಿ 6ನೇ ತರಗತಿ ಪ್ರವೇಶ ಕಲ್ಪಿಸಲಾಗುತ್ತಿದೆ.
ಜಿಲ್ಲೆಯ ವಿಕಲಚೇತನ ವಿದ್ಯಾರ್ಥಿಗಳು ಇದರ ಸದುಪಯೋಗಪಡಿಸಿಕೊಳ್ಳಲು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ಕೋರಿದ್ದಾರೆ.