

ತುಮಕೂರು: ತೋಟಗಾರಿಕೆ ಇಲಾಖೆ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ(ಆರ್ಕೆವಿವೈ)ಯಡಿ ತೋಟಗಾರಿಕೆ ರೈತರು ಹಾಗೂ ಉದ್ದಿಮೆದಾರರಿಗೆ ನೆರವು ನೀಡಲು ಅರ್ಜಿ ಅಹ್ವಾನಿಸಿದೆ.
ತೋಟಗಾರಿಕೆ ರೈತರು ಹಾಗೂ ಉದ್ದಿಮೆದಾರರಿಗೆ ಈ ಯೋಜನೆಯಡಿ ವೈಯಕ್ತಿಕ, ಸಮುದಾಯ ನೀರು ಸಂಗ್ರಹಣಾ ಘಟಕ(2500 ಘ.ಮೀ, 4500 ಘ.ಮೀ, 6500 ಘ.ಮೀ. ಹಾಗೂ 9000 ಘ.ಮೀ. ಅಳತೆಯ ನೆಲಮಟ್ಟಕ್ಕಿಂತ ಕೆಳಗೆ ರಚಿಸುವ); ಫಾರಂಗೇಟ್, ತೆಂಗು ಶೇಖರಣಾ ಘಟಕ, ಪ್ಲಾಸ್ಟಿಕ್ ಕ್ರೇಟ್ಸ್ ಮತ್ತು ಕಡಿಮೆ ವೆಚ್ಚದ ಹಣ್ಣು ಮಾಗಿಸುವ ಘಟಕ ನಿಮಾರ್ಣ; ಲಘು ಪೋಫಿಕಾಂಶಗಳ ಮಿಶ್ರಣಗಳು, ಹವಾಮಾನ ಆಧಾರಿತ ಘಟಕ ಸೋಲಾರ್ ಪಂಪ್ಸೆಟ್ಗಳಿಗೆ ಸಹಾಯಧನ ನೀಡಲಾಗುವುದು.
ಆಸಕ್ತ ರೈತರು ಹಾಗೂ ಉದ್ದಿಮೆದಾರರು ಅರ್ಜಿಯೊಂದಿಗೆ ಪಹಣಿ, ಆಧಾರ್ ಪ್ರತಿ, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ರೈತರು ಜಾತಿ ದೃಢೀಕರಣ ಪತ್ರವನ್ನು ಲಗತ್ತಿಸಿ ಆಯಾ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಅಥವಾ ಹತ್ತಿರದ ಗ್ರಾಮ ಪಂಚಾಯಿತಿ ಕಚೇರಿಗೆ ಸಲ್ಲಿಸಬಹುದು.
ಮಾಹಿತಿಗಾಗಿ ಆಯಾ ತಾಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರನ್ನು ಸಂಪರ್ಕಿಸಿ.