

ತುಮಕೂರು: ರುಡ್ಸೆಟ್ ಸಂಸ್ಥೆ ಎಂಬ್ರಾಯ್ಡರಿ, ಆರಿ ವರ್ಕ್ ಹಾಗೂ ಫ್ಯಾಬ್ರಿಕ್ ಪೇಟಿಂಗ್ ಕುರಿತ 30 ದಿನಗಳ ಉಚಿತ ತರಬೇತಿ ನೀಡಲು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ನಿರುದ್ಯೋಗಿ ಯುವತಿಯರಿಂದ ಅರ್ಜಿ ಆಹ್ವಾನಿಸಿದೆ.
ಅರ್ಜಿ ಸಲ್ಲಿಸಲು ಅಕ್ಟೋಬರ್ 8 ಕೊನೆಯ ದಿನವಾಗಿದ್ದು, ತರಬೇತಿ ಅವಧಿಯಲ್ಲಿ ಉಚಿತ ಊಟ ಮತ್ತು ವಸತಿ ವ್ಯವಸ್ಥೆ ಕಲ್ಪಿಸಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರ ನೀಡಲಾಗುವುದು.
ಮಾಹಿತಿಗೆ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊ.9740982585, 9380162042 ಸಂಪರ್ಕಿಸಿ.