

ತುಮಕೂರು: ಸಹಕಾರ ರಂಗ ದಿಗ್ಗಜ ಸಚಿವ ಕೆ.ಎನ್.ರಾಜಣ್ಣ ಅವರಿಗೆ ಜಿಲ್ಲೆಯಲ್ಲಿ ಎಲ್ಲಾ ಸಹಕಾರಿಗಳು ಪಕ್ಷಾತೀತವಾಗಿ ಅಭಿನಂದನಾ ಸಮಾರಂಭ ಆಯೋಜಿಸಿದ್ದು ಭಾನುವಾರ ಬೆಳಗ್ಗೆ 10.30ಕ್ಕೆ ನಗರದ ಗಾಜಿನಮನೆಯಲ್ಲಿ ಕಾರ್ಯಕ್ರಮ ನಡೆಯಲಿದೆ.
ಜಿಲ್ಲಾ ಸಹಕಾರಿಗಳ ಅಭಿನಂದನಾ ಸಮಿತಿ ವತಿಯಿಂದ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಸಚಿವ ಕೆ.ಎನ್.ರಾಜಣ್ಣ ಅವರ ಜತೆಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ, ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಸೇರಿದಂತೆ ಜಿಲ್ಲೆಯ ಎಲ್ಲಾ ಶಾಸಕರನ್ನು ಸನ್ಮಾನಿಸಲಾಗುತ್ತಿದೆ.
ಸಹಕಾರಿ ಕ್ಷೇತ್ರದಲ್ಲಿ ಆಲದ ಮರ ಎಂದೇ ಗುರುತಿಸಿಕೊಂಡಿರುವ ಕೆ.ಎನ್.ರಾಜಣ್ಣ ಜಿಲ್ಲೆಯಲ್ಲಿ ರಾಜಕೀಯವಾಗಿ ಪ್ರಭಾವಿಯಾಗಿ ಗುರುತಿಸಿಕೊಂಡಿದ್ದು ಎಲ್ಲಾ ಸಹಕಾರಿಗಳೂ ಒಂದೇ ವೇದಿಕೆಗೆ ಬಂದು ಸನ್ಮಾನ ಮಾಡುತ್ತಿರುವುದು ವಿಶೇಷ ಎನ್ನಿಸಿದೆ.