ಸಖಿ-ಒನ್ ಸ್ಟಾಪ್ ಸೆಂಟರ್‌ಗೆ ಅರ್ಜಿ; ತಿಪಟೂರನಲ್ಲಿ ಉದ್ಯೋಗಾವಕಾಶ

saki one stop
Published on

ತುಮಕೂರು: ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಒಂದೇ ಸೂರಿನಡಿ ವೈದ್ಯಕೀಯ ಸೇವೆ, ಪೊಲೀಸ್ ಸೇವೆ, ಕಾನೂನು ಸೇವೆ, ಸಮಾಲೋಚನೆ ಮತ್ತು ತಾತ್ಕಾಲಿಕ ವಸತಿ ಒದಗಿಸುವ ಕೇಂದ್ರ ಸರ್ಕಾರದ ಸಖಿ-ಒನ್ ಸ್ಟಾಪ್ ಸೆಂಟರ್ ಹೆಚ್ಚುವರಿ ಘಟಕವನ್ನು ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿದ್ದು, ಸದರಿ ಘಟಕಕ್ಕೆ ವಿವಿಧ ಹುದ್ದೆಗಳನ್ನು ತಾತ್ಕಾಲಿಕವಾಗಿ ಭರ್ತಿ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಘಟಕ ಆಡಳಿತಾಧಿಕಾರಿ 1 ಹುದ್ದೆ, ಸಮಾಜ ಸೇವಾ ಕಾರ್ಯಕರ್ತರು, ಕೇಸ್ ವರ್ಕರ್ 1 ಹುದ್ದೆ, ವಕೀಲರು(ಪ್ಯಾರಾ ಲೀಗಲ್‌ಹುದ್ದೆ) 2 ಹುದ್ದೆ, ಸ್ವಚ್ಚತಗಾರರು, ಸೆಕ್ಯೂರಿಟಿ 1 ಹುದ್ದೆಗಾಗಿ ಅರ್ಜಿ ಸಲ್ಲಿಸಬಹುದು.

ಮಾಹಿತಿಗೆ ಉಪನಿರ್ದೇಶಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಆವರಣ, ಎಂ.ಜಿ.ರಸ್ತೆ, ತುಮಕೂರು. ದೂ.0816 2956624 ಸಂಪರ್ಕಿಸಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net