

ತುಮಕೂರು: ಕರ್ನಾಟಕ ಮಾಹಿತಿ ಆಯೋಗದ ರಾಜ್ಯ ಮಾಹಿತಿ ಆಯುಕ್ತ ಕೆ.ಬದ್ರುದ್ದೀನ್ ಹಾಗೂ ಡಾ.ಹರೀಶ್ಕುಮಾರ್ ಜಿಪಂ ಸಭಾಂಗಣದಲ್ಲಿ ಸೆ.20ರ ಬೆಳಗ್ಗೆ 11ಕ್ಕೆ ಮಾಹಿತಿ ಹಕ್ಕು ಕಾಯ್ದೆ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಾರ್ವಜನಿಕ ಮಾಹಿತಿ ಅಧಿಕಾರಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.
ಸಂವಾದ ಕಾರ್ಯಕ್ರಮದ ಮಧ್ಯಾಹ್ನ 12.30ಕ್ಕೆ ಸಾರ್ವಜನಿಕರೊಂದಿಗೆ ಮಾಹಿತಿ ಹಕ್ಕು ಕಾಯ್ದೆಯ ಮಹತ್ವ ಕುರಿತು ಚರ್ಚಾ ಕಾರ್ಯಕ್ರಮ ನಡೆಯಲಿದೆ.