ಸಂವಿಧಾನ ಜಾಗೃತಿ ಜಾಥಾ ಜಿಲ್ಲೆಗೆ ಪ್ರಥಮ ಸ್ಥಾನ; ಪ್ರಶಸ್ತಿ ಸ್ವೀಕರಿಸಿದ ಡಿಸಿ, ಸಿಇಒ

CMMMMM
Published on

ತುಮಕೂರು: ಜಿಲ್ಲೆಯಾದ್ಯಂತ ಜ.26 ರಿಂದ ಫೆ.23ರ ವರೆಗೂ ಜರುಗಿದ ಸಂವಿಧಾನ ಜಾಗೃತಿ ಜಾಥಗೆ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ದೊರೆತಿದೆ.

ಜಿಲ್ಲೆಯಲ್ಲಿ 330 ಗ್ರಾಪಂ, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಜಾಥ ಸಂಚರಿಸಿದ್ದು ಸಾಕಷ್ಟು ಕಾರ್ಯಕಮಗಳನ್ನು ಈ ಜಾಥಾ ಅಂಗವಾಗಿಯೇ ಆಯೋಜಿಸಿ ಸಾರ್ವಜನಿಕರ ಸಹಭಾಗಿತ್ವಕ್ಕೆ ಒತ್ತು ನೀಡಲಾಗಿತ್ತು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಸರ್ಕಾರದ ವತಿಯಿಂದ ಆಯೋಜಿಸಿರುವ ಸಂವಿಧಾನ ಜಾಗೃತಿ ಜಾಥಾದ `ರಾಷ್ಟ್ರೀಯ ಐಕ್ಯತಾ ಬಹಿರಂಗ ಸಮಾವೇಶ' ಸಿಎಂ ಸಿದ್ದರಾಮಯ್ಯ ಅವರಿಂದ ಜಿಲ್ಲಾಧಿಕಾರಿ ಶುಭಕಲ್ಯಾಣ್ ಹಾಗೂ ಜಿಪಂ ಸಿಇಒ ಜಿ.ಪ್ರಭು ಒಂದು ಲಕ್ಷ ರೂ. ನಗದು ಬಹುಮಾನ, ಸ್ಮರಣ ಸಂಚಿಕೆಯೊಂದಿಗೆ ಪ್ರಶಸ್ತಿ ಸ್ವೀಕರಿಸಿದರು.

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ. ಮಹದೇವಪ್ಪ ಇದ್ದರು. ಕಾರ್ಯಕ್ರಮಕ್ಕೆ ತೆರಳಲು ಜಿಲ್ಲೆಯ ಎಲ್ಲಾ ಗ್ರಾಪಂಗಳಿಂದಲೂ ಬಸ್ ವ್ಯವಸ್ಥೆ ಮಾಡಲಾಗಿತ್ತು.

ದಲಿತ ಪರ ಮುಖಂಡರು, ಸ್ತ್ರೀ ಶಕ್ತಿ ಸಂಘಟನೆ, ಸ್ವಸಹಾಯ ಸಂಘ, ಮಹಿಳೆಯರು ಹೋರಾಟಗಾರರು, ಸಾರ್ವಜನಿಕರು ಸಮಾವೇಶಕ್ಕೆ ತೆರಳಲು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ತೆರಳಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net