

ತುಮಕೂರು: ತುಮಕೂರು ಉಪವಿಭಾಗಾಧಿಕಾರಿ ಅಧ್ಯಕ್ಷತೆಯಲ್ಲಿ ಡಿ.13ರಂದು ಬೆಳಗ್ಗೆ 10ಕ್ಕೆ ನಗರದ ಜಿಲ್ಲಾ ಬಾಲ ಭವನ ಸಭಾಂಗಣದಲ್ಲಿ ಉಪವಿಭಾಗ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಕುಂದು ಕೊರತೆ ಸಭೆ ಏರ್ಪಡಿಸಲಾಗಿದೆ.
ಸಭೆಯಲ್ಲಿ ತುಮಕೂರು, ಕುಣಿಗಲ್, ಗುಬ್ಬಿ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಂಘಟನೆಯ ಪದಾಧಿಕಾರಿಗಳು, ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಭಾಗವಹಿಸಲಿದ್ದಾರೆ.