

ತುಮಕೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಅಂಗವಿಕಲರ ಕ್ರೀಡಾ ಸಂಸ್ಥೆ ಹಾಗೂ ತುಮಕೂರು ಜಿಲ್ಲಾ ಅಂಗವಿಕಲರ ಕ್ರೀಡಾ ಸಂಸ್ಥೆ ಸಹಯೋಗದಲ್ಲಿ 22ನೇ ರಾಷ್ಟ್ರೀಯ ಪ್ಯಾರಾ ಅಥ್ಲೆಟಿಕ್ ಚಾಂಪಿಯನ್ ಶಿಪ್ ಗೋವಾ ರಾಜ್ಯದ ಪಣಜಿಯಲ್ಲಿ ಜನವರಿ 9 ರಿಂದ ಜ.13ರ ವರೆಗೆ ಆಯೋಜಿಸಲಾಗಿದೆ.
ಈ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಪೂರ್ವಭಾವಿಯಾಗಿ ತುಮಕೂರು ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಡಿ.22ರಂದು ಬೆಳಗ್ಗೆ 8ರಿಂದ ಸಂಜೆ 6.30ರ ವರೆಗೆ
ಆಯ್ಕೆ ಪ್ರಕ್ರಿಯೆ ನಡೆಸಲಾಗುತ್ತಿದೆ.
ರಾಜ್ಯದ ಎಲ್ಲಾ ಪ್ಯಾರಾ ಅಥ್ಲೆಟಿಕ್ ಕ್ರೀಡಾಪಟುಗಳು ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಡಿ.18ರೊಳಗೆ entriesksaph@gmail.com ವಿಳಾಸಕ್ಕೆ ಕಳುಹಿಸಬಹುದು