ಲಂಚ ಕೇಳಿದ್ದ ಹಿರಿಯ ಕೆಎಎಸ್ ಅಧಿಕಾರಿ ತಬಸ್ಸಮ್ ಜಹೇರಾಗೆ ನಾಲ್ಕು ವರ್ಷ ಜೈಲು

13TMK_Crime_Thabasam
Published on

ತುಮಕೂರು: ಲಂಚ ಪಡೆದ ಆರೋಪ ಸಾಭೀತಾದ ಹಿನ್ನೆಲೆಯಲ್ಲಿ ಇಬ್ಬರು ಅಧಿಕಾರಿಗಳಿಗೆ ನಾಲ್ಕು ವರ್ಷ ಜೈಲು ಹಾಗೂ 20 ಸಾವಿರ ರೂ. ದಂಡ ವಿಧಿಸಿ 7ನೇ ಅಪರ ಜಿ¯್ಲÁ ಮತ್ತು ಸತ್ರ ನ್ಯಾಯಾಲಯದ ತೀರ್ಪು ನ್ಯಾಯಾಧೀಶರಾದ ಟಿ.ಪಿ.ರಾಮಲಿಂಗೇಗೌಡ ಶಿಕ್ಷೆ ಪ್ರಕಟಿಸಿದ್ದಾರೆ.

ತುಮಕೂರು ಉಪವಿಭಾಗಾಧಿಕಾರಿಯಾಗಿದ್ದ ತಬಸ್ಸಮ್ ಜಹೇರಾ ಹಾಗೂ ಬೆಳ್ಳಾವಿ ಉಪತಹಸೀಲ್ದಾರ್ ಶಬ್ಬೀರ್ 2017 ಮೇ.23ರಂದು ಜಮೀನಿನ ಖಾತೆ ಮಾಡಿಕೊಡಲು ರೈತರೊಬ್ಬರಿಂದ 20 ಸಾವಿರ ರೂ. ಲಂಚ ಸ್ವೀಕರಿಸುವಾಗ ಭ್ರಷ್ಟಾಚಾರ ನಿಗ್ರಹದಳದ ಅಧಿಕಾರಿಗಳು ದಾಳಿ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದರು.

ಕುಣಿಗಲï ತಾಲೂಕಿನ, ಅವರಗೆರೆಯ ವಿ.ಜಯರಾಮ್ ಎಂಬುವವರ 1 ಎಕರೆ 7 ಕುಂಟೆ ಜಮೀನಿನ ಖಾತೆ ಮಾಡಿಕೊಡಲು ಲಂಚ ಸ್ವೀಕರಿಸುವಾಗ ದಾಳಿ ನಡೆದಿತು.

ಆರೋಪ ದೃಢವಾದ ಹಿನ್ನೆಲೆಯಲ್ಲಿ ಅಪರಾಧಿ ಅಧಿಕಾರಿಗಳಿಗೆ ಶಿಕ್ಷೆ ನೀಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net