ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ

DSC_1115
Published on

ತುಮಕೂರು: ಸಿದ್ಧಗಂಗಾಮಠದ ಗೋಕಟ್ಟೆಯಲ್ಲಿ ಕಾಲು ಜಾರಿ ಬಿದ್ದ ಬಾಲಕನನ್ನು ರಕ್ಷಿಸಲು ಹೋಗಿ ಮೃತಪಟ್ಟ ಲಕ್ಷ್ಮೀ, ಶಂಕರ, ಹರ್ಷಿತ್ ಮತ್ತು ಮಹದೇವಪ್ಪ ಮೃತಪಟ್ಟಿದ್ದು ಅವರ ಕುಟುಂಬಕ್ಕೆ ಸರ್ಕಾರಕ್ಕೆ ತಲಾ 2 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು.

ಸೋಮವಾರ ಸಿದ್ಧಗಂಗಾ ಮಠದ ದುರಂತ ನಡೆದ ಸ್ಥಳಕ್ಕೆ ಅಧಿಕಾರಿಗಳ ಜತೆ ಭೇಟಿ ನೀಡಿದ ನಂತರ ಸುದ್ದಿಗಾರರ ಜತೆ ಮಾತನಾಡಿ, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದರು.

ಮೃತರ ಕುಟುಂಬಸ್ಥರೊAದಿಗೆ ಮಾತನಾಡಿ ಸಾಂತ್ವನ ಹೇಳಿದರಲ್ಲದೆ, ಸ್ಥಳದಲ್ಲಿಯೇ ಮೃತರ ಆತ್ಮಕ್ಕೆ ಶಾಂತಿ ಕೋರಿ, ಇಂತಹ ದುರ್ಘಟನೆಗಳು ಮರುಕಳಿಸದಂತೆ ಮುಂಜಾಗೃತ ಕ್ರಮ ಅನುಸರಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಎಲ್ಲಾ ಗ್ರಾಮಗಳಲ್ಲಿಯೂ ಶಾಲೆಗಳ ಸುತ್ತಮುತ್ತ ಇರುವಂತಹ ಕೆರೆ, ಕಟ್ಟೆ ಸ್ಥಳಗಳಿಗೆ ಮಕ್ಕಳು ತೆರಳದಂತೆ ಪೋಷಕರು ಮಕ್ಕಳಿಗೆ ತಿಳಿ ಹೇಳಬೇಕು ಎಂದು ಹೇಳಿದರು.

ಮಾಜಿ ಸಚಿವ ಸೊಗಡು ಶಿವಣ್ಣ, ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಪಂ ಸಿಇಒ ಜಿ.ಪ್ರಭು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್‌ಕುಮಾರ್ ಶಹಾಪೂರ್‌ವಾಡ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net