ಕಣ್ಣಿನ ಸಮಸ್ಯೆಗಳ ಬಗ್ಗೆ ನಿರ್ಲಕ್ಷ್ಯ ಬೇಡ: ಡಾ.ಶಾಲಿನಿ

23_Siddaganga
Published on

ತುಮಕೂರು: ಕಣ್ಣಿನ ಆರೈಕೆಯಲ್ಲಿ ನಮ್ಮ ನಿರ್ಲಕ್ಷ ಭವಿಷ್ಯದಲ್ಲಿ ಕಣ್ಣಿನ ಸಮಸ್ಯೆಗಳಿಗೆ ಕಾರಣವಾಗುವ ಅಪಾವಿದ್ದು ಭವಿಷ್ಯವನ್ನು ಕತ್ತಲಾಗಿಸುತ್ತವೆ ಎಂದು ಸಿದ್ಧಗಂಗಾ ಮೆಡಿಕಲ್ ಕಾಲೇಜು ಪ್ರಾಚಾರ್ಯೆ ಡಾ.ಶಾಲಿನಿ ತಿಳಿಸಿದರು.

ಸಿದ್ಧಗಂಗಾ ಮಠಾಧ್ಯಕ್ಷ ಶ್ರೀಸಿದ್ಧಲಿಂಗ ಸ್ವಾಮೀಜಿಯವರ ಜನ್ಮವರ್ಧಂತಿ, ಜಿಲ್ಲಾ ಅಂಧತ್ವ ನಿಯಂತ್ರಣಾ ಕಾರ್ಯಕ್ರಮದ ಅಂಗವಾಗಿ ಇಂದು ಆಯೋಜಿಸಿದ್ದ ಉಚಿತ ಕ್ಯಾಟರ್ಯಾಕ್ಟ್ ಶಸ್ತçಚಿಕಿತ್ಸಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಣ್ಣ ವಯಸ್ಸಿನಿಂದಲೇ ಕಣ್ಣಿನ ಆರೋಗ್ಯದ ಬಗ್ಗೆ ಕಾಳಜಿ ಮಾಡಿ ಯಾವುದೇ ಕಣ್ಣಿನ ಸಮಸ್ಯೆಗಳು ಕಂಡು ಬಂದರೆ ವೈದ್ಯರನ್ನು ಭೇಟಿ ಮಾಡಿ. ಸಿದ್ಧಗಂಗಾ ಆಸ್ಪತ್ರೆ ಇಂತಹ ಉಚಿತ ಕಣ್ಣಿನ ಶಸ್ತ್ರಚಿಕಿತ್ಸೆಗಳ ಮೂಲಕ ಸಾರ್ವಜನಿಕರ ಆರೋಗ್ಯ ಕಾಳಜಿಯಲ್ಲಿ ಮಹತ್ವದ ಪಾತ್ರವಹಿಸಿದೆ ಎಂದರು.

ಪ್ಯಾರಾಮೆಡಿಕಲ್ ಕಾಲೇಜಿನ ಉಪಪ್ರಾಂಶುಪಾಲೆ ಡಾ.ವೀಣಾ ಪರಮೇಶ್, ಬಿಪಿ, ಶುಗರ್ ನಿಯಂತ್ರಣ ಸೇರಿದಂತೆ ಸರಿಯಾದ ಆಹಾರ ಕ್ರಮ ಹಾಗೂ ಜೀವನ ಶೈಲಿಯಿಂದ ಕಣ್ಣಿನ ಸಮಸ್ಯೆಗಳಿಂದ ದೂರವಿರಬಹುದು ಎಂದರು.

ಸಿದ್ಧಗಂಗಾ ಮೆಡಿಕಲ್ ಕಾಲೇಜು ಮೇಲ್ವಿಚಾರಕ ಡಾ.ನಿರಂಜನಮೂರ್ತಿ ಹಾಗೂ ಶಸ್ತçಚಿಕಿತ್ಸೆಗೆ ಒಳಗಾಗದ ರೋಗಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net