

ತುಮಕೂರು: ಬೆಂಗಳೂರಿನ ಮತದಾರರ ಪಟ್ಟಿ ಅಕ್ರಮ ಪ್ರಕರಣದಲ್ಲಿ ಅಮಾನತ್ತಾಗಿದ್ದ ಐಎಎಸ್ ಅಧಿಕಾರಿಗಳನ್ನು ಮತ್ತೆ ಕರ್ತವ್ಯಕ್ಕೆ ಸೇರಿಸಿಕೊಂಡಿರುವುದು ಸರಿಯಲ್ಲ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಗುಡುಗಿದರು.
ನಗರದಲ್ಲಿ ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಮತದಾರರ ಪಟ್ಟಿ ಅಕ್ರಮದಲ್ಲಿ ಅವರೆಲ್ಲರೂ ಶಾಮೀಲಾಗಿದ್ದಾರೆ, ನನ್ನ ಪ್ರಕಾರ ಬಿಬಿಎಂಪಿ ಕೂಡ ಶಾಮೀಲಾಗಿದೆ, ಬೆಂಗಳೂರು ಉಸ್ತುವಾರಿ ಹೊಣೆ ಹೊತ್ತಿರುವ ಸಿಎಂಗೆ ಜವಬ್ಧಾರಿ ಇಲ್ಲವೇ ಎಂದು ಪ್ರಶ್ನಿಸಿದರು.
ಭಾರತೀಯ ಚುನಾವಣಾ ಆಯೋಗವೇ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ಆರೋಪಿಸಿ ಅಮಾನತುಗೊಳಿಸಲು ಸೂಚನೆ ನೀಡಿದ್ದರೂ ಅವರನ್ನು ಮತ್ತೆ ಕರ್ತವ್ಯಕ್ಕೆ ಸೇರಿಸಿಕೊಳ್ಳುವುದು ಕಾನೂನು ಬಾಹಿರ ಎಂದರು.