ಶ್ರೀರಾಮ ಮಂದಿರ ಉದ್ಘಾಟನೆಯಲ್ಲಿ ಭಾಗವಹಿಸುತ್ತೇನೆ; ಸಿಎಂ ಸಿದ್ದರಾಮಯ್ಯ

SS MUTT (17)
Published on

ತುಮಕೂರು: ಬೆಂಗಳೂರಿನ ಮಹದೇವಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಿರ್ಮಿಸಿರುವ ಶ್ರೀರಾಮ ಮಂದಿರ ಉದ್ಘಾಟನಾ ಸಮಾರಂಭದಲ್ಲಿ ಸೋಮವಾರ ಭಾಗವಹಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ನಾನು ಭಾಗವಹಿಸುತ್ತಿಲ್ಲ ಆದರೆ, ಮಹದೇವಪುರದಲ್ಲಿ ಮಂದಿರ ಉದ್ಘಾಟನೆಯಲ್ಲಿ ಭಾಗವಹಿಸುತ್ತೇನೆ ಎಂದರು.

ಶ್ರೀರಾಮ ಮಂದಿರ ಉದ್ಘಾಟನೆ ಸಂದರ್ಭದಲ್ಲಿ ಮುಜರಾಯಿ ಇಲಾಖೆ ಎಲ್ಲಾ ದೇವಸ್ಥಾನದಲ್ಲಿ ಪೂಜೆ ನಡೆಯಲಿದೆ, ಸರ್ಕಾರಿ ರಜೆ ಘೋಷಣೆ ಮಾಡೋದಿಲ್ಲ ಎಂದು ಸ್ಪಷ್ಟಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net