ಸಿದ್ಧಾರ್ಥ ಮಡಿಕಲ್ ಕಾಲೇಜಿಗೆ ಆರೋಗ್ಯ ಸಚಿವ ಭೇಟಿ

Buddha (1)
Published on

ತುಮಕೂರು: ಜನರ ಸೇವೆ ಮಾಡುವುದೇ ವೈದ್ಯರ ಪ್ರಥಮ ಆದ್ಯತೆಯಾಗಬೇಕು. ಸೇವಾ ಮನಸ್ಥಿತಿ ಸದಾ ಜಾಗೃತವಾಗಿರಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ನಗರದ ಶ್ರೀಸಿದ್ದಾರ್ಥ ವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿ ಮಂಗಳವಾರ ಸೂಪರ್ ಸ್ಪೆಷಾಲಿಟಿ ಹೊರ ರೋಗಿ ವಿಭಾಗ ಹಾಗೂ ಸಿಬ್ಬಂದಿ ವಸತಿ ಗೃಹ ಸಮುಚ್ಚಯದ ಉದ್ಘಾಟಿಸಿ ಮಾತನಾಡಿದರು.

ಅಭಿವೃದ್ದಿ ಹೊಂದುತ್ತಿರುವ ದೇಶಕ್ಕೆ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದ ಬೆಳವಣಿಗೆ ಅತಿ ಮುಖ್ಯವಾಗುತ್ತದೆ. ಆರೋಗ್ಯ ಮತ್ತು ಶೈಕ್ಷಣಿಕ ವಲಯ ಅತ್ಯುತ್ತಮವಾಗಿದ್ದಲ್ಲಿ ಆ ದೇಶವನ್ನು ಅಭಿವೃದ್ದಿ ಹೊಂದಿದ ದೇಶವೆಂದು ಪರಿಗಣಿಸಬಹುದಾಗಿದೆ ಎಂದರು.

ಸಾಮಾನ್ಯ ಮನುಷ್ಯನಿಗೂ ಗುಣಮಟ್ಟದ ಆರೋಗ್ಯ ಸೇವೆ ಲಭ್ಯವಾಗಬೇಕು, ವೈದ್ಯರಿಗೆ ಜನರ ಸೇವೆಯೇ ದೇಶ ಸೇವೆಯಾಗಿದ್ದು, ವೈದ್ಯರು ರಾಷ್ಟç ಸೇವೆಗೆ ತಮ್ಮನ್ನು ತಾವು ಮುಡುಪಾಗಿಡಬೇಕು. ಜನರ ಜೀವನದ ಮೇಲೆ ಪ್ರಭಾವ ಬೀರುವ, ಬದುಕನ್ನು ಬದಲಾಯಿಸುವ ಶಕ್ತಿ ವೈದ್ಯಕೀಯ ಲೋಕಕ್ಕಿದೆ ಎಂದರು.

ಗೃಹ ಸಚಿವ ಡಾ: ಜಿ. ಪರಮೇಶ್ವರ್ ಮಾತನಾಡಿ, ಗ್ರಾಮೀಣ ಭಾಗದ ಜನರಿಗೆ ಉತ್ತಮ ಆರೋಗ್ಯ ನೀಡುವಲ್ಲಿ ರಾಜ್ಯ ಸರ್ಕಾರವು ಮುಂಚೂಣಿಯಲ್ಲಿದೆ. ರಾಜ್ಯದಲ್ಲಿ ಸುಮಾರು ಎರಡೂವರೆ ಸಾವಿರ ಪ್ರಾಥಮಿಕ ಆರೋಗ್ಯ ಕೇಂದ್ರಗಳಿದ್ದು ಗ್ರಾಮೀಣ ಜನರಿಗೆ ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.


ಸಿದ್ಧಾರ್ಥ ವಿವಿ ಉಪ ಕುಲಪತಿ ಕೆ.ವಿ.ಲಿಂಗೇಗೌಡ, ಕುಲಸಚಿವ ಕುರಿಯಾನ್, ಪ್ರಾಚಾರ್ಯ ಡಾ.ಮಲ್ಲಿಕಾರ್ಜುನ್ ಸಾನಿಕೊಪ್ಪ, ಸಿದ್ದಾರ್ಥ್, ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್‌ಕುಮಾರ್ ಶಹಾಪೂರ್‌ವಾಡ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net