ಶಿರಾಗೇಟ್ ರಸ್ತೆಯಲ್ಲಿ ಸಂಚಾರ ಬಂದ್; ಜಿಲ್ಲಾಧಿಕಾರಿ ಆದೇಶ

DC_SHUBHA
Published on

ತುಮಕೂರು: ನಗರದ ಅಮಾನಿಕೆರೆ ಕೋಡಿ ಹಳ್ಳಕ್ಕೆ ಸೇತುವೆ ನಿರ್ಮಾಣ ಕಾಮಗಾರಿ ಆರಂಭವಾಗಿದ್ದು ಸಾರ್ವಜನಿಕರ ಹಿತದೃಷ್ಟಿಯಿಂದ ವಾಹನ ಸಂಚಾರ ಮಾರ್ಗ ಬದಲಾಯಿಸಿ ಜಿಲ್ಲಾಧಿಕಾರಿ ಶುಭಕಲ್ಯಾಣ್ ಆದೇಶಿಸಿದ್ದಾರೆ.

ಶಿರಾ ಗೇಟ್ ಕಡೆಗೆ ಹೋಗುವ ಎಲ್ಲಾ ವಾಹನಗಳನ್ನು ಮತ್ತು ಶಿರಾ ಹಾಗೂ ಮಧುಗಿರಿ ಕಡೆಯಿಂದ ತುಮಕೂರು ನಗರಕ್ಕೆ ಬರುವ ಎಲ್ಲಾ ವಾಹನಗಳನ್ನು ಲಿಂಗಾಪುರ ಎನ್.ಹೆಚ್-48 ರಸ್ತೆ ಮತ್ತು ಹನುಮಂತಪುರ ಮುಖಾಂತರ ತುಮಕೂರು ಒಳಭಾಗಕ್ಕೆ ಬರಲು ಮತ್ತು ಹೊರಗೆ ಹೋಗಲು ಅವಕಾಶ ನೀಡಲಾಗಿದೆ.

ವಾಹನ ದಟ್ಟಣೆಯಿಂದ ಸೇತುವೆ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗುತ್ತಿದ್ದು, ಆದೇಶದನ್ವಯ ತುಮಕೂರು ನಗರದ ವಾಹನ ಸಂಚಾರವನ್ನು ಮುಂದಿನ ಆದೇಶದವರೆಗೆ ಬದಲಾಯಿಸಲಾಗಿದೆ.

ತುಮಕೂರು ನಗರದ ರಾಷ್ಟಿçÃಯ ಹೆದ್ದಾರಿ-4ರ ಸರಪಳಿ 71.29 ಕಿ.ಮೀ.ನಲ್ಲಿ ಅಮಾನಿಕರೆ ಕೋಡಿ ಹಳ್ಳಕ್ಕೆ ಸೇತುವೆ ನಿರ್ಮಾಣ ಕಾಮಗಾರಿಯನ್ನು ಕೈಗೊಳ್ಳಲು ಸುಮಾರು 120 ದಿನಗಳು ಬೇಕಾಗಿರುವುದರಿಂದ ಹಳೆಯ ರಾಷ್ಟಿçÃಯ ಹೆದ್ದಾರಿ-4 ರಸ್ತೆಯಲ್ಲಿ ಸಂಪೂರ್ಣವಾಗಿ ವಾಹನ ಸಂಚಾರ ಬಂದ್ ಮಾಡಲು ಹಾಗೂ ಬೇರೆ ಕಡೆಯಿಂದ ವಾಹನ ಸಂಚಾರಕ್ಕೆ ಬದಲಿ ವ್ಯವಸ್ಥೆ ಮಾಡಲಾಗಿದೆ.

ಆದೇಶವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಸೂಚಿಸಿರುವ ಜಿಲ್ಲಾಧಿಕಾರಿ ತಪ್ಪಿದಲ್ಲಿ ಅಂತಹ ವ್ಯಕ್ತಿಗಳ ವಿರುದ್ಧ ಕಾನೂನು ರೀತ್ಯಾ ಅಗತ್ಯ ಕ್ರಮ ವಹಿಸಲು ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net