ತುಮಕೂರು: ಕೃಷಿ ಇಲಾಖೆ ವತಿಯಿಂದ ಜನವರಿ 13 ಮತ್ತು 14ರಂದು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ "ಜಿಲ್ಲಾ ಮಟ್ಟದ ಸಿರಿಧಾನ್ಯ ಹಬ್ಬ ಹಾಗೂ ಸಿರಿಧಾನ್ಯ ಉತ್ಪಾದಕರು ಮತ್ತು ಮಾರುಕಟ್ಟೆದಾರರ ರಾಜ್ಯ ಮಟ್ಟದ ಕಾರ್ಯಗಾರ' ಆಯೋಜಿಸಲಾಗಿದೆ.
ಜನವರಿ 14ರಂದು ಬೆಳಿಗ್ಗೆ 11 ಗಂಟೆಗೆ ಸಿರಿಧಾನ್ಯಗಳ ಸಂಸ್ಕರಣೆ, ಮೌಲ್ಯವರ್ಧನೆ ಹಾಗೂ ಮಾರುಕಟ್ಟೆ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ನಡೆಯಲಿದೆ.
ಜಿಲ್ಲೆಯ ಎಲ್ಲಾ ನೋಂದಾಯಿತ ಸ್ವಸಹಾಯ ಗುಂಪು, ರೈತ ಉತ್ಪಾದಕ ಸಂಸ್ಥೆ, ಖಾಸಗಿ ಉದ್ದಿಮೆದಾರರು, ಆಹಾರ ಘಟಕಗಳ ಉದ್ದಿಮೆಯಲ್ಲಿ ಕಾರ್ಯನಿರತರಾದವರು, ರೈತ ಬಾಂಧವರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಲು ಕೃಷಿ ಇಲಾಖೆ ಮನವಿ ಮಾಡಿದೆ.