ನಗರ ಸ್ಥಳೀಯ ಸಂಸ್ಥೆ ಆಸ್ತಿ ನೋಂದಣಿಗೆ ತಂತ್ರಾಂಶ

Kaveri Software
Published on


ತುಮಕೂರು: ನೋಂದಣಿ ಮತ್ತು ಮುದ್ರಾಂಕ ಇಲಾಖೆ ನಗರ ಪ್ರದೇಶಗಳಲ್ಲಿನ ಕೃಷಿಯೇತರ ಆಸ್ತಿಗಳ ನೋಂದಣಿಗಾಗಿ ರೂಪಿಸಿದ್ದ ಇ-ಆಸ್ತಿ ತಂತ್ರಾಂಶವನ್ನು ಕಾವೇರಿ ತಂತ್ರಾಂಶಕ್ಕೆ ಸಂಯೋಜನೆ ಮಾಡಲಾಗಿದ್ದು, ಅ.7 ರಿಂದ ಜಿಲ್ಲೆಯ ಎಲ್ಲಾ ಉಪ ನೋಂದಣಿ ಕಚೇರಿಗಳಲ್ಲಿ ನಗರ ಸ್ಥಳಿಯ ಸಂಸ್ಥೆಗಳ ಸ್ಥಿರಾಸ್ತಿಗಳನ್ನು ಇ-ತಂತ್ರಾಂಶದ ಮೂಲಕ ನೋಂದಣಿ ಮಾಡಲಾಗುವುದು.


ಸ್ವತ್ತುಗಳ ನೋಂದಣಿ ವೇಳೆ ಸಾರ್ವಜನಿಕರು ಮೋಸ ಹೋಗುವುದನ್ನು ತಡೆಯಲು, ಸ್ವತ್ತುಗಳ ಸ್ವರೂಪ ಮತ್ತು ನೈಜ ಮಾಲೀಕರನ್ನು ಗುರುತಿಸಲು, ಸ್ವತ್ತುಗಳ ಖರೀದಿ ಸಂದರ್ಭಗಳಲ್ಲಿ ಉಂಟಾಗುವ ವ್ಯಾಜ್ಯ ಹಾಗೂ ಕಾನೂನು ತೊಂದರೆಗಳನ್ನು ತಪ್ಪಿಸುವ ಉದ್ದೇಶದಿಂದ ಈ ತಂತ್ರಾಂಶಗಳನ್ನು ಸಂಯೋಜನೆ ಮಾಡಲಾಗಿದ್ದು, ಸಾರ್ವಜನಿಕರು ನಗರ ಸ್ಥಳಿಯ ಸಂಸ್ಥೆ ವ್ಯಾಪ್ತಿಯಲ್ಲಿರುವ ಸ್ಥಿರಾಸ್ತಿಗಳ ವರ್ಗಾವಣೆ ಮತ್ತು ನೋಂದಣಿ ಜಿಲ್ಲೆಯ ಎಲ್ಲಾ ಉಪ ನೋಂದಣಿ ಕಚೇರಿಗಳಲ್ಲಿ ಮಾಡಿಸಬಹುದು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net