

ತುಮಕೂರು: ಕೇಂದ್ರ ರೈಲ್ವೇ ಮತ್ತು ಜಲ ಶಕ್ತಿ ರಾಜ್ಯ ಖಾತೆಯ ಸಚಿವ ವಿ. ಸೋಮಣ್ಣ ನವದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯ ಅವರನ್ನು ಭೇಟಿ ಮಾಡಿ ಹರಿಯಾಣ ರಾಜ್ಯದ ಚುನಾವಣೆ ಬಿಜೆಪಿ ಗೆಲುವಿಗೆ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭ ಬಳಸಿಕೊಂಡು ತುಮಕೂರು ಜಿಲ್ಲೆಯ ಅಭಿವೃದ್ಧಿ ಕುರಿತ ವಿಶೇಷ ಪ್ರಸ್ತಾವನೆಯನ್ನು ಪ್ರಧಾನಮಂತ್ರಿಗಳಿಗೆ ಸಲ್ಲಿಸಿ ತುಮಕೂರು ಲೋಕಸಭಾ ಕ್ಷೇತ್ರದ ಸರ್ವೋತೋಮುಖ ಅಭಿವೃದ್ದಿಗೆ ವಿಶೇಷ ಅನುದಾನ ನೀಡುವಂತೆ ಮನವಿ ಮಾಡಿದೆ ಎಂದು ಸೋಮಣ್ಣ ತಿಳಿಸಿದ್ದಾರೆ.
.ತುಮಕೂರು – ರಾಯದುರ್ಗ ಮತ್ತು ತುಮಕೂರು-ಚಿತ್ರದುರ್ಗ-ದಾವಣಗೆರೆ ರೈಲ್ವೇ ಮಾರ್ಗ 2027ರ ಜೂನ್ ನಲ್ಲಿ ಲೋಕಾರ್ಪಣೆಗೊಳ್ಳಲಿದ್ದು ಆ ಸಂದರ್ಭದಲ್ಲಿ ತುಮಕೂರಿಗೆ ಆಗಮಿಸುವಂತೆ ಮತ್ತು ತುಮಕೂರು ರೈಲ್ವೇ ನಿಲ್ದಾಣಕ್ಕೆ ಡಾ. ಶಿವಕುಮಾರ ಸ್ವಾಮೀಜಿ ಅವರ ಹೆಸರು ನಾಮಕರಣ ಮಾಡುವಂತೆ ಮನವಿ ಸಲ್ಲಿಸಿದ್ದಾರೆ.