ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ

application
Published on

ತುಮಕೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮುಸ್ಲಿಂ, ಕ್ರಿಶ್ಚಿಯನ್​, ಜೈನ್​, ಸಿಖ್​, ಬೌದ್ಧ ಹಾಗೂ ಪಾರ್ಸಿ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳಿಗೆ 25000 ರೂ. ವಿಶೇಷ ಪ್ರೋತ್ಸಾಹಧನ ನೀಡಲು ಅರ್ಹರಿಂದ ಆನ್​ಲೈನ್​ ಮೂಲಕ ಅರ್ಜಿ ಆಹ್ವಾನಿಸಿದೆ.

ಅರ್ಜಿ ಸಲ್ಲಿಸುವ ಜ.20 ಕೊನೆಯ ದಿನ. ನ್ಯಾಷನಲ್​ ಕೌನ್ಸಿಲ್​ ಆಫ್​ ಟೀಚರ್​ ಎಜುಕೇಷನ್​ನಿಂದ ಮಾನ್ಯತೆ ಪಡೆದಿರುವ ಸರ್ಕಾರಿ, ಅರೆ ಸರ್ಕಾರಿ, ಅನುದಾನಿತ, ಖಾಸಗಿ ಕಾಲೇಜುಗಳಲ್ಲಿ ಬಿ.ಇಡ್​ ಕೋರ್ಸ್​ಗೆ ದಾಖಲಾತಿ ಹೊಂದಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಜ.16ರೊಳಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಜಾಲತಾಣ https://sevasindhu.karnataka.gok.in ಮೂಲಕ ಸಲ್ಲಿಸಿ, ಸಲ್ಲಿಸಿದ ಅರ್ಜಿಯ ಪ್ರತಿಯನ್ನು ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಕಚೇರಿಗೆ ಸಲ್ಲಿಸಬೇಕು. ಮಾಹಿತಿಗೆ ದೂ.0816- 2273724 ಸಂಪರ್ಕಿಸಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net