ಏ.4ಕ್ಕೆ ಕಾಂಗ್ರೆಸ್ ಅಭ್ಯರ್ಥಿ ಎಸ್‌ಪಿಎಂ ನಾಮಪತ್ರ

DCM Parameshwar
Published on

ತುಮಕೂರು: ತುಮಕೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ.ಮುದ್ದಹನುಮೇಗೌಡ ಏ.4 ರಂದು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಡಾ.ಜಿ.ಪರಮೇಶ್ವರ ಹೇಳಿದರು.

ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ನಾಮಪತ್ರ ಸಲ್ಲಿಸುವ ದಿನ ಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷರು ಬರುವ ಸಾಧ್ಯತೆಯಿದ್ದು, ಇನ್ನೂ ಖಚಿತಪಟ್ಟಿಲ್ಲ ಆದರೆ, ನಮ್ಮ ಜಿಲ್ಲೆಯ ಎಲ್ಲಾ ನಾಯಕರು, ಮುಖಂಡರುಗಳು ಸಹ ಭಾಗವಹಿಸಲಿದ್ದಾರೆ ಎಂದರು.

ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಮುದ್ದಹನುಮೇಗೌಡರ ಗೆಲುವು ನಿಶ್ಚಿತವಾಗಿದೆ, ಅವರ ಪರವಾದ ದೊಡ್ಡ ಅಲೆಯೇ ಜಿಲ್ಲೆಯಲ್ಲಿ ಸೃಷ್ಠಿಯಾಗಿದ್ದು ಮುದ್ದಹನುಮೇಗೌಡರು ಸಜ್ಜನ ವ್ಯಕ್ತಿ, ಜತೆಗೆ ಶಾಸಕರಾಗಿ, ಸಂಸದರಾಗಿ ಉತ್ತಮವಾಗಿ ಕೆಲಸ ಮಾಡಿ ಜನಮನ್ನಣೆ ಗಳಿಸಿರುವ ವ್ಯಕ್ತಿ. ಹಾಗಾಗಿ, ಅವರು ಗೆಲುವು ಸಾಧಿಸುತ್ತಾರೆ ಎಂಬ ವಿಶ್ವಾಸ, ನಂಬಿಕೆ ಇದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net