

ತುಮಕೂರು: ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಸೆಪ್ಟೆಂಬರ್ 20ರಂದು ಬೆಳಗ್ಗೆ 10ಕ್ಕೆ ನಗರದ ಜಿಲ್ಲಾ ಬಾಲಭವನ ಆವರಣದಲ್ಲಿ ಜಿಲ್ಲೆಯ ಹಿರಿಯ ನಾಗರಿಕರಿಗಾಗಿ ಕ್ರೀಡೆ ಮತ್ತು ಸಾಂಸತಿಕ ಕಾರ್ಯಕ್ರಮ ಆಯೋಜಿಸಲಾಗಿದೆ
ಕ್ರೀಡಾ ವಿಭಾಗದಲ್ಲಿ ಮ್ಯೂಸಿಕಲ್ ಛೇರ್, ಬಿರುಸಿನ ನಡಿಗೆ, ಬಾಲ್ ಇನ್ ದಿ ಬಕೆಟ್ ಹಾಗೂ ಸಾಂಸ್ಕತಿಕ ವಿಭಾಗದಲ್ಲಿ ಏಕಪಾತ್ರಾಭಿನಯ, ಗಾಯನ(ಜನಪದ ಅಥವಾ ಭಾವಗೀತೆ) ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, 60 ವರ್ಷ ಮೇಲ್ಪಟ್ಟ ಪುರುಷ ಹಾಗೂ ಮಹಿಳೆಯರಿಗೆ ಪ್ರತ್ಯೇಕವಾಗಿ ಸ್ಪರ್ಧೆ ನಡೆಸಲಾಗುತ್ತಿದೆ.