ಕ್ರೀಡೆಗಳ ಮೂಲಕ ಮತದಾನ ಜಾಗೃತಿ

Belagavi Election
Published on

ತುಮಕೂರು: ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ವಿವಿಧ ಇಲಾಖೆ ಹಾಗೂ ಕಾಲೇಜುಗಳ ಸಹಯೋಗದಲ್ಲಿ ಸ್ವೀಪ್ ಕಾರ್ಯಕ್ರಮದಡಿ ಏ.7ರಂದು ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ವಿವಿಧ ಕ್ರೀಡೆಗಳ ಮೂಲಕ ಮತದಾನ ಜಾಗೃತಿ ಕಾರ್ಯಕ್ರಮ ್ನ ಹಮ್ಮಿಕೊಂಡಿದೆ.


ಭಾನುವಾರ ಬೆಳಗ್ಗೆ 6ಕ್ಕೆ ಕ್ರಿಕೆಟ್ ಹಾಗೂ ಮಧ್ಯಾಹ್ನ 3ಕ್ಕೆ ಮಹಿಳಾ ಕ್ರೀಡಾಪಟುಗಳಿಗೆ ವಾಲಿಬಾಲ್ ಮತ್ತು ಥ್ರೋಬಾಲ್ ಕ್ರೀಡೆ ಆಯೋಜಿಸಲಾಗಿದೆ ಎಂದು ಪಾಲಿಕೆ ಆಯುಕ್ತರು ಹಾಗೂ ಸಹಾಯಕ ಚುನಾವಣಾಧಿಕಾರಿ ಬಿ.ವಿ.ಅಶ್ವಿಜ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net