ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ತುಮಕೂರಿನಲ್ಲಿ; 14 ಸಾವಿರ ನೌಕರರು ಭಾಗಿ ಸಾಧ್ಯತೆ

Jyothi_MLA
Published on

ತುಮಕೂರು: ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಅ.27, 28 ಹಾಗೂ 29ರಂದು ತುಮಕೂರಿನಲ್ಲಿ ನಡೆಯಲಿದ್ದು ಜಿಲ್ಲಾಡಳಿತ ಸಿದ್ಧತೆ ಆರಂಭಿಸಿದೆ.

ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಫರ್ಧೆಯಲ್ಲಿ ರಾಜ್ಯದೆಲ್ಲೆಡೆಯಿಂದ 9952 ನೌಕರರು ಭಾಗವಹಿಸಲಿದ್ದು ಈ ಪೈಕಿ ಮಹಿಳೆಯರೇ 3500 ಜನರಿದ್ದಾರೆ. ಎಲ್ಲರಿಗೂ ಸೌಕರ್ಯ ಒದಗಿಸಲು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಮಂಗಳವಾರ ಪೂರ್ವಭಾವಿ ನಡೆಸಿದ್ದಾರೆ.

ನಗರದ ವಿವಿಧ ಶಾಲೆ, ಕಾಲೇಜು, ವಿಶ್ವವಿದ್ಯಾನಿಲಯ ಸೇರಿ 17 ಆವರಣಗಳಲ್ಲಿ 53 ವಿವಿಧ ಕ್ರೀಡೆ ನಡೆಯಲಿವೆ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಎಲ್ಲಾ ಕ್ರೀಡಾಪಟುಗಳಿಗೂ ಕ್ಯಾಪ್, ಟ್ರಾö್ಯಕ್ ಶೂಟ್ ಸೇರಿದಂತೆ ಎಲ್ಲಾ ಸವಲತ್ತುಗಳನ್ನು ನೀಡಲಾಗುವುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ಎನ್.ನರಸಿಂಹರಾಜು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net