ಚಲಿಸುತ್ತಿದ್ದ ರೈಲಿಗೆ ಸಿಕ್ಕಿ ವಿದ್ಯಾರ್ಥಿನಿ ಆತ್ಮಹತ್ಯೆ

ACCCDENT_TIP
Published on

ತುಮಕೂರು: ಚಲಿಸುತ್ತಿದ್ದ ರೈಲು ಹಳಿಗೆ ತಲೆಯಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಿಪಟೂರು ರೈಲ್ವೆ ನಿಲ್ದಾಣದಲ್ಲಿ ಇಂದು ನಡೆದಿದೆ.

ತಿಪಟೂರಿನ ಕಲ್ಪತರು ಕಾಲೇಜಿನಲ್ಲಿ ಎರಡನೇ ವರ್ಷದ ಪದವಿ ಓದುತ್ತಿದ್ದ, ಕಡೂರು ತಾಲೂಕಿನ ದೇವರಹಳ್ಳಿ ಗ್ರಾಮದ ಸುರೇಶ್ ಎಂಬುವವರ ಪುತ್ರಿ ವರ್ಷಿಣಿ(19), ಮೃತ ವಿದ್ಯಾರ್ಥಿನಿ.

ಪ್ರತಿದಿನ ಊರಿನಿಂದ ಕಾಲೇಜಿಗೆ ರೈಲಿನಲ್ಲಿ ಪ್ರಯಾಣ ಮಾಡ್ತಿದ್ದ ವರ್ಷಿಣಿ, ಇಂದು ಕಾಲೇಜು ಮುಗಿಸಿ ಮನೆಗೆ ತೆರಳುವಾಗ ಚಲಿಸುತ್ತಿದ್ದ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆರೋಗ್ಯ ಸಮಸ್ಯೆಯಿಂದ ವರ್ಷಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಬಹುದು ಎಂದು ಅನುಮಾನಿಸಲಾಗಿದ್ದು ಅರಸೀಕೆರೆ ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net