

ಪಾವಗಡ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಥಮ ಬಿಕಾಂ ವಿದ್ಯಾರ್ಥಿನಿಗೆ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮಧುಗಿರಿ ತಾಲೂಕಿನ ಮಿಡಿಗೇಶಿ ಮೈಥಿಲಿ(20) ಮೃತ ವಿದ್ಯಾರ್ಥಿನಿ. ಶನಿವಾರ ತರಗತಿ ಮುಗಿಸಿ ಪಟ್ಟಣದ ನಿಲ್ದಾಣಕ್ಕೆ ಬರುವಾಗ ಚಳ್ಳಕೆರೆ ಕ್ರಾಸ್ ಬಳಿ ಸುಸ್ತಾಗಿ ಕೆಳಗೆ ಬಿದ್ದಿದ್ದ್ದುದಾರೆ. ಕೂಡಲೇ ಸ್ನೇಹಿತರು ಆಕೆಯನ್ನು ಪಾವಗಡ ತಾಯಿ ಮತ್ತು ಮಕ್ಕಳ ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಬರುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ
ಸಾರ್ವಜನಿಕ ಆಸ್ಪತ್ರೆಯ ಬಳಿ ವಿದ್ಯಾರ್ಥಿನಿ ಸ್ನೇಹಿತರ ಮತ್ತು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು, ನಂತರ ವೈದ್ಯರು ಮರಣೋತ್ತರ ಪರೀಕ್ಷೆ ನಡೆಸಿದ್ದು ಘಟನೆ ಪಾವಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.