ನೀರಾವರಿ ಹಾಗೂ ಸಂಸ್ಕರಣಾ ಘಟಕಗಳಿಗೆ ಸಹಾಯಧನ; ರೈತರಿಂದ ಅರ್ಜಿ ಆಹ್ವಾನ

Drip irrigation
Published on

ತುಮಕೂರು: ನೀರಿನ ಸಮರ್ಥ ಬಳಕೆ ಉತ್ತೇಜಿಸುವ ಸಲುವಾಗಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಕೃಷಿ ಚಟುವಟಿಕೆಗೆ ಅನುಕೂಲವಾಗುವಂತೆ ತುಂತುರು ನೀರಾವರಿ ಹಾಗೂ ಸಂಸ್ಕರಣಾ ಘಟಕಗಳಿಗೆ ಸಹಾಯಧನ ಪಡೆಯಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ತುಂತುರು ನೀರಾವರಿ ಘಟಕಗಳನ್ನು ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಶೇ.90 ಸಹಾಯಧನದಲ್ಲಿ ಜೇಷ್ಠತಾ ಆಧಾರದ ಮೇರೆಗೆ ವಿತರಿಸಲಾಗುವುದು.

ಆಸಕ್ತ ರೈತರು ತುಂತುರು ನೀರಾವರಿ ಘಟಕ ಅಥವಾ ಕೃಷಿ ಉತ್ಪನ್ನಗಳ ಸಂಸ್ಕರಣ ಘಟಕಗಳನ್ನು ಪಡೆಯಲು ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕದ ನಕಲು ಪ್ರತಿ, ರೂ.20 ಛಾಪಾ ಕಾಗದ, ಪಹಣಿ, ಬೆಳೆ ದೃಢೀಕರಣ ಪತ್ರ, ನೀರಾವರಿ ದೃಢೀಕರಣ ಪತ್ರ, ಸಣ್ಣ, ಅತಿಸಣ್ಣ ರೈತ ದೃಢೀಕರಣ ಪತ್ರ, ಜಾತಿ ಪ್ರಮಾಣ ಪತ್ರ, ಭಾವಚಿತ್ರ, ಮತ್ತಿತರ ಅಗತ್ಯ ದಾಖಲೆಗಳೊಂದಿಗೆ ರೈತ ಸಂಪರ್ಕ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net