ಸಿಎಂ ಆಗುವ ಆಸೆಗಾಗಿ ಜಿಲ್ಲೆಯ ಹಿತ ಕೈಬಿಟ್ಟ ಪರಮೇಶ್ವರ; ಸುರೇಶಗೌಡ ವಾಗ್ದಾಳಿ

Suresh_Gowda11
Published on

ತುಮಕೂರು: ಹೇಮಾವತಿ ಲಿಂಕ್ ಕೆನಾಲ್​ ವಿರೋಧಿಸಿ ಬಿಜೆಪಿ, ಜೆಡಿಎಸ್​ ಪಾದಯಾತ್ರೆ ನೇತೃತ್ವ ವಹಿಸಿ ಬಿಜೆಪಿ ಶಾಸಕ ಬಿ.ಸುರೇಶ್​ಗೌಡ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್​ ವಿರುದ್ಧ ಏಕವಚನದಲ್ಲಿಯೇ ವಾಗ್ದಾಳಿ ನಡೆಸುವ ಮೂಲಕ ಹೋರಾಟವನ್ನು ರಾಜಕೀಯಗೊಳಿಸಿದರು.

ಪರಮೇಶ್ವರ್​ ಸಿಎಂ ಅಗಬೇಕು ಎಂದು ಆಸೆ ಇಟ್ಟುಕೊಂಡು ಕಾಂಗ್ರೆಸ್​ ಮುಖಂಡರ ವಿರುದ್ಧ ಮಾತನಾಡುವ ಧೈರ್ಯ ಮಾಡುತ್ತಿಲ್ಲ. ಹಣೆಯ ಬರಹದಲ್ಲಿ ಬರೆದಿದ್ದರೆ ಸಿಎಂ ಆಗುತ್ತೀರ ಮೊದಲು ರಾಜೀನಾಮೆ ಕೊಟ್ಟು ಸರ್ಕಾರದಿಂದ ಹೊರಬಂದು ಹೋರಾಟದಲ್ಲಿ ಭಾಗವಹಿಸಿ, ಜನರು ನಿಮ್ಮನ್ನು ಒಪು$್ಪತ್ತಾರೆ ಎಂದು ಸಲಹೆ ನೀಡಿದರು.

ಜಿಲ್ಲೆಯ ಜನರ ಹಿತಕ್ಕಾಗಿ ನಾವು ನಡೆಸುತ್ತಿರುವ ಹೋರಾಟದ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್​ ದುರಹಂಕಾರದಿಂದ ಮಾತನಾಡಿದ್ದಾರೆ, ನಾವು ಕೂಡ ಅವರಿಗೆ ಅಂತದ್ದೇ ಭಾಷೆಯಲ್ಲಿ ಪ್ರತ್ಯುತ್ತರ ನೀಡಬಹುದು, ಕಳ್ಳತನ ಮಾಡಿ, ಅಕ್ರಮವೆಸಗಿ ತಿಹಾರ್​ ಜೈಲಿಗೆ ಹೋಗಿದ್ದರು ಎಂದು ಹೇಳೊಕೆ ಆಗುತ್ತಾ ಎಂದು ಮೊದಲಿಸಿದರು.

ಜಿಲ್ಲೆಯ ಬಿಜೆಪಿ, ಜೆಡಿಎಸ್​ ಪಕ್ಷದ ನಾಲ್ಕು ಶಾಸಕರ ವಿರುದ್ಧ ಶಿವಕುಮಾರ್​ ಮಾಡಿರುವ ಆರೋಪ ಸಾಬೀತುಪಡಿಸಿದರೆ ನಾವೆಲ್ಲರೂ ರಾಜಕೀಯ ನಿವೃತ್ತಿ ಪಡೆಯುತ್ತೇವೆ, ಕುಣಿಗಲ್​ಗೆ ನೀರು ತೆಗೆದುಕೊಂಡು ಹೋಗಲು ನಮ್ಮ ಅಭ್ಯಂತರವಿಲ್ಲ, ರಾಮನಗರಕ್ಕೆ ತೆಗೆದುಕೊಂಡು ಹೋಗಲು ನಾವು ಬಿಡುವುದಿಲ್ಲ ಎಂದು ಹರಿಹಾಯ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net