ಸುಶಾಸನ ಸಪ್ತಾಹ-ಪ್ರಶಾಸನ ಗ್ರಾಮಗಳ ಕಡೆಗೆ

DC_Office_Tumakuru
Published on

ತುಮಕೂರು: ಭಾರತ ಸರ್ಕಾರದ ಆಡಳಿತ ಸುಧಾರಣೆ ಮತ್ತು ಸಾರ್ವಜನಿಕರ ಕುಂದುಕೊರತೆಗಳ ಇಲಾಖೆ ವತಿಯಿಂದ ಡಿ.24ರ ವರೆಗೆ "ಸುಶಾಸನ ಸಪ್ತಾಹ-ಪ್ರಶಾಸನ ಗ್ರಾಮಗಳ ಕಡೆಗೆ' ಎಂಬ ಅಭಿಯಾನವನ್ನು ಕೈಗೊಳ್ಳುವಂತೆ ನಿರ್ದೇಶಿಸಿರುವ ಹಿನ್ನೆಲೆಯಲ್ಲಿ ಡಿ.23ರಂದು ಬೆಳಗ್ಗೆ 11ಕ್ಕೆ ಜಿಪಂ ಸಭಾಂಗಣದಲ್ಲಿ ಕಾರ್ಯಾಗಾರ ಆಯೋಜಿಸಲಾಗಿದೆ.

ಅಭಿಯಾನದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವತಿಯಿಂದ ಉತ್ತಮ ಆಡಳಿತ ನೀಡುವ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳ ವತಿಯಿಂದ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಮಟ್ಟದಲ್ಲಿ ವಿಶೇಷ ಶಿಬಿರ, ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದ್ದು, ಇದರಲ್ಲಿ ಸಾರ್ವಜನಿಕರ ಕುಂದುಕೊರತೆಗಳನ್ನು ಪರಿಹರಿಸಲು ಹಾಗೂ ಉತ್ತಮ ಸೇವೆ ನೀಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net