ಭದ್ರ ಮೇಲ್ದಂಡೆ ಕಾಮಗಾರಿ ವೀಕ್ಷಿಸಿದ ಟಿಬಿಜೆ

TBJ
Published on

ತುಮಕೂರು: ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ, ಮಾಜಿ ಸಚಿವ ಟಿ.ಬಿ.ಜಯಚಂದ್ರ ಇಂದು ಭದ್ರಾ ಮೇಲ್ದಂಡೆ ನೀರಾವರಿ ಯೋಜನೆ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿದರು.

ಚಿಕ್ಕನಾಯಕನಹಳ್ಳಿ ತಾಲೂಕು ಮೋಟಿಹಳ್ಳಿ ಸಮೀಪ ಅಧಿಕಾರಿಗಳ ಜತೆ ಭೇಟಿ ನೀಡಿದ್ದ ಅವರು, ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ನೀರಾವರಿ ಇಲಾಖೆ ಇಂಜಿನಿಯರ್‌ಗಳಿಗೆ ಸೂಚನೆ ನೀಡಿದರು.

ಮಾಜಿ ಶಾಸಕ ಕೆ.ಎಸ್.ಕಿರಣï‌ಕುಮಾರ್, ನಿವೃತ್ತ ಇಂಜಿನಿಯರ್ ಈಶ್ವರಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಟಿ.ಚಿಕ್ಕಣ್ಣ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net