

ತುಮಕೂರು: ಕೆಲವರು ಜಯಚಂದ್ರ ಅವರಿಗೆ ವಯಸ್ಸಾಗಿದೆ ಎಂದು ಹೇಳುತ್ತಾರೆ ಆದರೆ, ಜಯಚಂದ್ರ ಶಕ್ತಿ ಏನೆಂಬುದು ಅವರಿಗೆ ಗೊತ್ತಿಲ್ಲ ಎಂದು ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ರಾಜಕೀಯ ವಿರೋಧಿಗಳಿಗೆ ಟಾಂಗ್ ನೀಡಿದ್ದಾರೆ.
ನಗರದ ಕುಂಚಿಟಿಗ ಸಮುದಾಯ ಭವನದಲ್ಲಿ ಇಂದು ಅಖಿಲ ಕುಂಚಿಟಿಗರ ಮಹಾಮಂಡಲ, ಕುಂಚಿಟಿಗ ಒಕ್ಕಲಿಗರ ವಿದ್ಯಾಭಿವೃದ್ಧಿ ಸಂಘದ ವತಿಯಿಂದ ಆಯೋಜಿಸಿದ್ದ ಕುಂಚಿಟಿಗರಿಗೆ ಒಬಿಸಿ ಹಕ್ಕೊತ್ತಾಯ ಸಭೆಯಲ್ಲಿ ಮಾತನಾಡಿದ ಅವರು, ವಯಸ್ಸಿನ ಕಾರಣದಿಂದ ಮಂತ್ರಿ ಸ್ಥಾನ ಕೈತಪ್ಪಿರುವ ಬಗ್ಗೆ ಪರೋಕ್ಷವಾಗಿ ಹೊರಹಾಕಿದರು.
ಸುದೀರ್ಘವಾಗಿ 50 ವರ್ಷಗಳ ಕಾಲ ರಾಜಕೀಯ ಮಾಡಿದ್ದೇನೆ, ಮುಂದೆ ರಾಜಕೀಯ ನಿವೃತ್ತಿ ಪಡೆಯಲು ನಾನೇ ನಿರ್ಧರಿಸಿದ್ದೇನೆ ಆದರೆ, ನನಗೆ ಈಗಲೂ ಶಕ್ತಿಯಿದ್ದು ಕೆಲವರಿಗೆ ಅದರ ಅರಿವಿಲ್ಲ ಎಂದರು.