

ತುಮಕೂರು: ಕೇಂದ್ರ ಸರ್ಕಾರದ ಶಿಕ್ಷಣ ಮಂತ್ರಾಲಯವು ಉತ್ತಮ ಶಿಕ್ಷಕ ಪ್ರಶಸ್ತಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಜುಲೈ 15 ಕಡೆಯ ದಿನವಾಗಿದೆ.
ಆಸಕ್ತ ಶಿಕ್ಷಕರು ಜಾಲತಾಣ https://nationalawardstoteachers.education.gov.in/ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಜಿಲ್ಲಾ ನೋಡಲ್ ಅಧಿಕಾರಿ ಸಂಪರ್ಕಿಸಬಹುದು.