

ತುಮಕೂರು: ಅನಿಯಂತ್ರಿತ ಲೋಡ್‌ಶೆಡ್ಡಿಂಗ್ ಶಾಕ್ ಸರ್ಕಾರಿ ಇಲಾಖೆಗಳಿಗೂ ತಟ್ಟಿದ್ದು ತುಮಕೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿದ್ಯುತ್ ಇಲ್ಲದೆ ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಉಪವಿಭಾಗಾಧಿಕಾರಿ ಗೌರವ್‌ಕುಮಾರ್‌ಶೆಟ್ಟಿ ಕೋರ್ಟ್ ಕಲಾಪ ನಡೆಸಿದ್ದಾರೆ.
ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿದ್ಯುತ್ ಕೈಕೊಟ್ಟಿದ್ದು ಜಿಲ್ಲಾಧಿಕಾರಿ ಕಚೇರಿ ಸಂಕಿರ್ಣದಲ್ಲಿರುವ ಉಪವಿಭಾಗಾಧಿಕಾರಿಗಳ ನ್ಯಾಯಾಲಯದ ಕಲಾಪ ಕೂಡ ಮೊಬೈಲ್ ಬೆಳಕಿನಲ್ಲಿ ನಡೆದಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿಯೂ ವಿದ್ಯುತ್ ಕೈಕೊಟ್ಟರೆ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳದಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಅಪಸ್ವರ ಕೇಳಿಬರುವಂತಾಗಿದೆ.