

ತುಮಕೂರು: ತುಮಕೂರು ವಿವಿ ವಿಜ್ಞಾನ ಕಾಲೇಜಿನ 4ನೇ ವರ್ಷದ ಬಿ.ಎಸ್ಸಿ ಮತ್ತು ಬಿಸಿಎ ನಾಲ್ಕು ವರ್ಷದ ಸ್ನಾತಕ ಹಾನಸ್ರ್ ಪದವಿ ಕೋರ್ಸ್ಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಪ್ರವೇಶಾತಿ ಬಯಸುವ ವಿದ್ಯಾರ್ಥಿಗಳು ವೆಬ್ಸೈಟ್ ವಿಳಾಸ www.ucst.ac.in ನಿಂದ ಅರ್ಜಿ ನಮೂನೆ ಡೌನ್ಲೋಡ್ ಮಾಡಿಕೊಂಡು, ಭರ್ತಿ ಮಾಡಿದ ಅರ್ಜಿಯನ್ನು ಅ.10ರೊಳಗಾಗಿ ಸೂಕ್ತ ದಾಖಲೆಗಳೊಂದಿಗೆ ಕಾಲೇಜಿನ ಕಚೇರಿಗೆ ಸಲ್ಲಿಸಬಹುದು ಎಂದು ವಿವಿ ವಿಜ್ಞಾನ ಕಾಲೇಜಿನ ಪ್ರಾಚಾರ್ಯ ತಿಳಿಸಿದ್ದಾರೆ.