ಉಪ ಲೋಕಾಯುಕ್ತರ ಭೇಟಿ ಇಂದು

lokayuktha
Published on

ತುಮಕೂರು: ರಾಜ್ಯ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದಲ್ಲಿ ಅ.18ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1.30 ಹಾಗೂ ಮಧ್ಯಾಹ್ನ 2.30 ರಿಂದ ಸಂಜೆ 5ರ ವರೆಗೆ ನಗರದ ಡಾ.ಗುಬ್ಬಿ ವೀರಣ್ಣ ಕಲಾ ಕ್ಷೇತ್ರದಲ್ಲಿ ಜಿಲ್ಲಾ ವ್ಯಾಪ್ತಿಯ ಸಾರ್ವಜನಿಕ ಕುಂದು-ಕೊರತೆ ಅಹವಾಲು ಸ್ವೀಕರಿಸಲಿದ್ದಾರೆ.
ದೂರು, ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ ಸಭೆ ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್​ ಅಧೀಕ್ಷಕರ ಎ.ವಿ.ಲಕ್ಷಿ$್ಮನಾರಾಯಣ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್​. ಫಣೀಂದ್ರ ಹಾಗೂ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಸಭೆ ಉದ್ಘಾಟಿಸುವರು. ಜಿಲ್ಲಾಧಿಕಾರಿ ಶುಭಕಲ್ಯಾಣ್​, ಮುಖ್ಯ ಅತಿಥಿಗಳಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಿ.ಜಯಂತ ಕುಮಾರ್​, ಜಿಪಂ ಸಿಇಒ ಜಿ.ಪ್ರಭು, ಪಾಲಿಕೆ ಆಯುಕ್ತ ಬಿ.ವಿ.ಅಶ್ವಿಜ, ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಕೆ.ವಿ.ಅಶೋಕ್​ ಸೇರಿದಂತೆ ಕರ್ನಾಟಕ ಲೋಕಾಯುಕ್ತ ಕಚೇರಿಯ ವಿವಿಧ ಅಧಿಕಾರಿಗಳು ಭಾಗವಹಿಸುವರು.

ಸಂಜೆ 5.30 ರಿಂದ 6.30ರ ವರೆಗೆ ಡಾ.ಗುಬ್ಬಿ ವೀರಣ್ಣ ಕಲಾ ಕ್ಷೇತ್ರದಲ್ಲಿ ಸಾರ್ವಜನಿಕ ಆಡಳಿತದಲ್ಲಿ ಕರ್ನಾಟಕ ಲೋಕಾಯುಕ್ತ ಸಂಸ್ಥೆ ಪಾತ್ರ ಮತ್ತು ಕರ್ನಾಟಕ ಲೋಕಾಯುಕ್ತ ಕಾಯ್ದೆ 1984ರ ಕುರಿತು ಕಾನೂನು ಅರಿವು ಕಾರ್ಯಕ್ರಮ ನಡೆಯಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net