

ತುಮಕೂರು: ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮವು ಸ್ವಯಂ ಉದ್ಯೋಗ ಸಾಲ, ಸ್ವಯಂ ಉದ್ಯೋಗ ನೇರಸಾಲ, ಅರಿವು-ಶೈಕ್ಷಣಿಕ ಸಾಲ, ವಿದೇಶಿ ವ್ಯಾಸಂಗ, ಗಂಗಾಕಲ್ಯಾಣ, ಸ್ವಾವಲಂಬಿ ಸಾರಥಿ ಯೋಜನೆಗಳಡಿ ಸಾಲ ಮತ್ತು ಸಹಾಯಧನದ ಸೌಲಭ್ಯ ಒದಗಿಸಲು ಸೇವಾಸಿಂಧು ಪೋರ್ಟಲ್ ಮೂಲಕ ಉಪ್ಪಾರ ಮತ್ತು ಇದರ ಉಪಜಾತಿಗೆ ಸೇರಿದವರಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತರು ಅರ್ಜಿಯನ್ನು ಸೆ.16ರೊಳಗೆ ಕರ್ನಾಟಕ ಒನ್, ಜನಸ್ನೇಹಿ ಕೇಂದ್ರ, ನಾಗರೀಕ ಸೇವಾ ಕೇಂದ್ರ ಹಾಗೂ ಗ್ರಾಮ ಒನ್ ಮೂಲಕ ಸೇವಾಸಿಂಧು ಪೋರ್ಟಲ್ನಲ್ಲಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗೆ ನಿಗಮದ ವೆಬ್ಸೈಟ್: https://upparadevelopment.karnataka.gov.in ಅಥವಾ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಅಥವಾ ದೂ.0816-2005008 ಸಂಪರ್ಕಿಸಿ.