

ತುಮಕೂರು: ನಾಡಪ್ರಭು ಕೆಂಪೇಗೌಡರ ಜಯಂತೋತ್ಸವ ಆಚರಣಾ ಸಮಿತಿ ವತಿಯಿಂದ ತುಮಕೂರಿನಲ್ಲಿ ಆ.11ರಂದು ಬೆಳಗ್ಗೆ 11.30ಕ್ಕೆ ನಗರ ಡಾ.ಗುಬ್ಬಿ ವೀರಣ್ಣ ರಂಗಮಂದಿರದಲ್ಲಿ ನಾಡಪ್ರಭು ಶ್ರೀಕೇಂಪೇಗೌಡರ 514ನೇ ಜಯಂತೋತ್ಸವ, ಪ್ರಶಸ್ತಿ ಪ್ರದಾನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮದಲ್ಲಿ ಒಕ್ಕಲಿಗ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಲಿದ್ದು ಎಸ್ಸೆಸ್ಸೆಲ್ಸಿ ಹಾಗೂ ಪಿಯು ಪರೀಕ್ಷೆಯಲ್ಲಿ ಶೇ.95ಕ್ಕಿಂತ ಹೆಚ್ಚು ಅಂಕ ಪಡೆದಿರುವವರು ಅರ್ಜಿ ಸಲ್ಲಿಸಬಹುದು.
ಮಾಹಿತಿ ಭೈರವ ಪ್ಲೆ ವುಡ್ಸ್, ಜೆ.ಸಿ.ರಸ್ತೆ, ಮಂಡಿಪೇಟೆ, ತುಮಕೂರು. ಮೊ.9449472006, 8123742059 ಸಂಪರ್ಕಿಸಿ.