

ತುಮಕೂರು: ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ರೈತರಿಗೆ ವಿವಿಧ ಪಶುಪಾಲನೆ ಕುರಿತು ಉಚಿತ ತರಬೇತಿ ನೀಡಲು ಉದ್ದೇಶಿಸಿದೆ.
ಆಧುನಿಕ ಹೈನುಗಾರಿಕೆ ತರಬೇತಿಯನ್ನು ಸೆಪ್ಟೆಂಬರ್ 12 ಮತ್ತು 13ರಂದು ಹಾಗೂ ಆಧುನಿಕ ಕೋಳಿ ಸಾಕಾಣಿಕೆ ತರಬೇತಿಯನ್ನು ಸೆ.17 ಮತ್ತು 18ರಂದು ಹಮ್ಮಿಕೊಳ್ಳಲಾಗಿದೆ. ಆಸಕ್ತರು ನಿಗಧಿಪಡಿಸಿದ ದಿನಾಂಕದಂದು ಬೆಳಗ್ಗೆ 10 ಗಂಟೆಗೆ ತರಬೇತಿಗೆ ಹಾಜರಾಗಬಹುದು.
ತರಬೇತಿಗೆ ಹಾಜರಾಗಲಿಚ್ಛಿಸುವವರು ಇತ್ತೀಚಿನ 2 ಪಾಸ್‌ಪೋರ್ಟ್ ಅಳತೆ ಭಾವಚಿತ್ರ, ರೈತರ ಫ್ರೂಟ್ ಐಡಿ ಸಂಖ್ಯೆ, ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ(ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಾಗಿದ್ದಲ್ಲಿ)ವನ್ನು ಕಡ್ಡಾಯವಾಗಿ ತರಬೇಕು.
ಮಾಹಿತಿಗೆ ಹತ್ತಿರದ ಪಶು ವೈದ್ಯಕೀಯ ಸಂಸ್ಥೆ ಅಥವಾ ದೂ.0816 2251214 ಸಂಪರ್ಕಿಸಿ.